Sunday, December 7, 2025
Sunday, December 7, 2025

Lokhande Snehal Sudhakar ಹಾಸ್ಟೆಲ್ ಗಳಲ್ಲಿ ಮೇಲ್ವಿಚಾರಕರು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನ ಪ್ರೀತಿಯಿಂದ ಕಾಣಬೇಕು- ಸ್ನೇಹಲ್ ಸುಧಾಕರ್ ಲೋಖಂಡೆ

Date:

Lokhande Snehal Sudhakar ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವುದರ ಜೊತೆಗೆ ಅವರ ಆರೋಗ್ಯ ಕಾಪಾಡುವುದು ಅತಿ ಅವಶ್ಯಕವಾಗಿದೆ ಎಂದು ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾಕರು ಮತ್ತು ಅಡುಗೆ ಸಿಬ್ಬಂದಿಗಳಿಗೆ ಹಾಗೂ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಾಸ್ಟೆಲ್ ವಿದ್ಯಾರ್ಥಿಗಳು ತಂದೆ ತಾಯಿಗಳನ್ನು ಬಿಟ್ಟು ವಿದ್ಯಾರ್ಥಿನಿಲಯದ ಮೇಲ್ವಿಚಾರಕರು ಮತ್ತು ಅಲ್ಲಿನ ಸಿಬ್ಬಂದಿಗಳ ಮೇಲೆ ನಂಬಿಕೆ ಇಟ್ಟುಕೊಂಡು ಬಂದಿರುತ್ತಾರೆ. ಗ್ರಾಮೀಣ ಭಾಗದಲ್ಲಿ ಅವಕಾಶಗಳ ಕೊರತೆ ಮತ್ತು ಬಡತನದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳಿಗೆ ಆಗಮಿಸುತ್ತಾರೆ. ಆದ್ದರಿಂದ ಮೇಲ್ವಿಚಾರಕರು ಅವರನ್ನು ಪ್ರೀತಿ ಮತ್ತು ಕಾಳಜಿ ಯಿಂದ ನೋಡಿಕೊಳ್ಳಬೇಕು. ಆಹಾರ ತಯಾರಿಯಲ್ಲಿ ಸ್ವಚ್ಚತೆ, ಗುಣಮಟ್ಟ ಕಾಪಾಡಿಕೊಂಡು ಬರಬೇಕು.

ಅಡುಗೆಯ ಸಿಬ್ಬಂದಿಗಳು ಮತ್ತು ಮೇಲ್ವಿಚಾರಕರು ನಡುವೆ ಹೊಂದಾಣಿಕೆ ಅಗತ್ಯವಾಗಿದ್ದು ಹಾಸ್ಟೆಲ್ ಗಳಲ್ಲಿ ಯಾವುದೇ ಸಮಸ್ಯೆಗಳು ನಿರ್ಮಾಣವಾಗದಂತೆ ಎಚ್ಚರ ವಹಿಸಬೇಕು. ಹಾಗೂ ವಿದ್ಯಾರ್ಥಿಗಳ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು, ವ್ಯತ್ಯಾಸಗಳು ಕಂಡು ಬಂದಲ್ಲಿ ಸೂಕ್ತ ಚಿಕಿತ್ಸೆ ಕುರಿತು ಗಮನ ನೀಡುವುದು ನಿಮ್ಮ ಜವಬ್ದಾರಿ ಆಗಿದೆ ಎಂದು ಸೂಚಿಸಿದರು.

ಹಾಸ್ಟೆಲ್ ನಲ್ಲಿ ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಕಾಣಬೇಕು. ಅಡುಗೆ ಸಿಬ್ಬಂದಿಗಳು ಅತಿ ಜಾಗರೂಕತೆಯಿಂದ ತಮ್ಮ ಕಾರ್ಯವನ್ನು ನಿರ್ವಹಿಸಬೇಕು. ಇಲಾಖೆಗೆ, ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳು ಆಗದಂತೆ ಎಚ್ವರಿಕೆಯಿಂದ ಕಾರ್ಯನಿರ್ವಹಿಸಿ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಆಹಾರ ನಿರೀಕ್ಷಕರದ ಸೋಮೇಶ್ವರ್ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಸಂರಕ್ಷಣೆ, ದಾಸ್ತಾನು ಕೊಠಡಿಯ ಕುರಿತು ಮಾಹಿತಿಯನ್ನು ನೀಡಿದರು.

Lokhande Snehal Sudhakar ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ, ಎಲ್ಲಾ ತಾಲೂಕಿನ ಸಹಾಯಕ ನಿರ್ದೇಶಕರುಗಳು, ಮೊರಾರ್ಜಿ ವಸತಿ ಶಾಲೆಗಳ ಪ್ರಾಂಶುಪಾರುಗಳು, ಅಧಿಕಾರಿಗಳು, ಸಿಬ್ಬಂದಿಗಳು ಅಡುಗೆ ಸಹಾಯಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...