Friday, September 27, 2024
Friday, September 27, 2024

Rotary Club Shimoga ವೈವಿಧ್ಯಮಯ ಜೀವನಶೈಲಿಯ ದೇಶ ಭಾರತ – ಪ್ರೊ.ಧನಂಜಯ್

Date:

Rotary Club Shimoga ವಿಶ್ವದ ಇತರೆ ದೇಶಗಳಿಗೆ ಹೋಲಿಸಿದರೆ ಭಾರತ ದೇಶವು ಅತ್ಯಂತ ವೈವಿಧ್ಯಮಯ ಹಾಗೂ ಶ್ರೇಷ್ಠ ಜೀವನಶೈಲಿಯ ಪರಂಪರೆ ಹೊಂದಿದೆ ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ. ಧನಂಜಯ್ ಹೇಳಿದರು.

ರಾಜೇಂದ್ರ ನಗರದ ರೋಟರಿ ಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತ ಮತ್ತು ಅಮೇರಿಕಾದಲ್ಲಿನ ಜೀವನಶೈಲಿ ವಿಷಯ ಕುರಿತು ಮಾತನಾಡಿ, ವಿದೇಶದಲ್ಲಿ ಆರೋಗ್ಯ, ಶಿಕ್ಷಣ ಸೌಲಭ್ಯಗಳು ವಿಭಿನ್ನವಾಗಿ ಗುಣಮಟ್ಟ ಹೊಂದಿವೆ. ಭಾರತ ದೇಶದಲ್ಲಿ ವಿವಿಧ ಸೌಕರ್ಯಗಳ ಕೊರತೆ ಇದೆ ಎಂದು ತಿಳಿಸಿದರು.

ಮಾಹಿತಿ ಮತ್ತು ತಂತ್ರಜ್ಞಾನ ಯುಗದಲ್ಲಿ ಭಾರತ ಸರ್ಕಾರ ಮಾನವ ಸಂಪನ್ಮೂಲವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರೆ ದೇಶದ ಆರ್ಥಿಕ ಸ್ಥಿತಿ, ಶೈಕ್ಷಣಿಕ ವ್ಯವಸ್ಥೆ, ಸಾಂಸ್ಕೃತಿಕ ವ್ಯವಸ್ಥೆ, ವ್ಯವಹಾರ, ವೈದ್ಯಕೀಯ ಸೌಲಭ್ಯ ಎಲ್ಲವೂ ಉತ್ತಮಗೊಳ್ಳುತ್ತದೆ ಎಂದರು.

Rotary Club Shimoga ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ನಮ್ಮ ಭಾರತ ದೇಶದ ಸಂಸ್ಕೃತಿ ಎಲ್ಲ ದೇಶಗಳಿಗಿಂತ ತುಂಬಾ ಪವಿತ್ರವಾದದ್ದು ಹಾಗೂ ವೈವಿಧ್ಯತೆಯಿಂದ ಕೂಡಿದೆ. ನಮ್ಮ ದೇಶದಲ್ಲಿ ಪರಸ್ಪರ ಪ್ರೀತಿ, ಸ್ನೇಹ, ವಿಶ್ವಾಸ, ಸಂಸ್ಕಾರ ಇದೆ ಎಂದು ಹೇಳಿದರು.

ಮಾನವೀತೆಯಿಂದ ಬದುಕು ಸಾಗಿಸಲು ನಮ್ಮ ದೇಶ ಸುಸಂಸ್ಕೃತವಾಗಿದೆ. ಬೇರೆ ಬೇರೆ ದೇಶಗಳಂತೆ ಹೆದರುವಂತಹ ಪರಿಸ್ಥಿತಿ ನಮ್ಮ ದೇಶಕ್ಕೆ ಇಲ್ಲ. ನಮ್ಮ ದೇಶವನ್ನು ಪ್ರೀತಿಸಿ ಗೌರವಿಸೋಣ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನಿವೃತ್ತ ಪ್ರಾಚಾರ್ಯ ಪ್ರೊ. ಧನಂಜಯ ಅವರಿಗೆ ಸನ್ಮಾನಿಸಿ ಗೌರವಿಸಿದರು. ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಸಂತ ಹೋಬಳಿದಾರ್, ಶ್ರೀಕಾಂತ್, ಮಹೇಶ್, ಅರುಣ್ ದಿಕ್ಷಿತ್, ಶಶಿಕಾಂತ್ ನಾಡಿಗ್, ಚಂದ್ರಶೇಖರಯ್ಯ, ಡಾ. ಪರಮೇಶ್ವರ್ ಶಿಗ್ಗಾವ್, ಡಾ. ಅರುಣ್, ಆದಿಮೂರ್ತಿ, ಕಾರ್ಯದರ್ಶಿ ಕಿಶೋರ್, ರಮೇಶ್ ಭಟ್, ಮುಕುಂದ ಗೌಡ, ರಾಮಚಂದ್ರ ರಾವ್, ಧರಣೇಂದ್ರ ದಿನಕರ್, ರೋಟರಿ ಸದಸ್ಯರು, ಇನ್ನರ್ ವೀಲ್ ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...