Thursday, September 17, 2026
Thursday, September 17, 2026

Press Distributors ಪತ್ರಿಕಾ ವಿತರಕರಿಗಾಗಿ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಲು ಮನವಿ

Date:

Press Distributors ಪತ್ರಿಕಾ ವಿತರಕರಿಗೆ ಸಮುದಾಯ ಭವನ ನಿರ್ಮಾಣಕ್ಕಾಗಿ ನಿವೇಶನ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಪತ್ರಿಕಾ ವಿತರಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಹೆಮ್ಮೆಯ ವಿಷಯವೇ ಆಗಿದೆ. ಅಪಘಾತ ವಿಮೆಯನ್ನು ಘೋಷಣೆ ಮಾಡಿದ್ದೀರಿ. ಆದರೆ,ಇನ್ನೂ ಕೆಲವು ಸಮಸ್ಯೆಗಳಿವೆ. ಈ ಬಾರಿಯ ಬಜೆಟ್‌ನಲ್ಲಿ ಪತ್ರಿಕಾ ವಿತರಕರಿಗಾಗಿ ಕನಿಷ್ಟ 5 ಕೋಟಿ ರೂ.ಗಳ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು. ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನೀಡಬೇಕು. ಜಿಲ್ಲಾ ಕೇಂದ್ರದ ಪತ್ರಿಕಾ ವಿತರಕರಿಗೆ ನಿವೇಶನ ನೀಡಬೇಕು. ಎಲೆಕ್ಟ್ರಿಕಲ್ ಬೈಕ್‌ಗಳನ್ನು ಕೊಳ್ಳಲು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಬೇಕು ಎಂಬುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಮನವಿಯಲ್ಲಿ ಆಗ್ರಹಿಸಲಾಗಿದೆ.

Press Distributors ಸಂದರ್ಭದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಮಾಲತೇಶ್, ಪ್ರಧಾನ ಕಾರ್ಯದರ್ಶಿ ಮುಕ್ತಾರ್ ಅಹಮ್ಮದ್, ಪರಶುರಾಮರಾವ್, ಅಜಾದುಲ್ಲಾ, ಪ್ರಾಣೇಶ್, ಮಲ್ಲಿಕಾರ್ಜುನ, ಸೋಮಶೇಖರ್ ಸೇರಿದಂತೆ ಹಲವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...