Thursday, August 13, 2026
Thursday, August 13, 2026

Sant Sevalal Jayanti ಫೆ.15 ರಂದು ಸಂತ ಸೇವಾಲಾಲ್ ಜಯಂತಿ ಆಚರಣೆಗೆ ಸಕಲ ಸಿದ್ಧತೆ

Date:

Sant Sevalal Jayanti ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಬಂಜಾರ ಸಂಘ ಶಿವಮೊಗ್ಗ ಇವರ ಸಂಯಕ್ತಾಶ್ರಯದಲ್ಲಿ ಫೆ.15 ರ ಬೆಳಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಂತ ಶ್ರೀ ಸೇವಾಲಾಲ್ ಜಯಂತಿಯನ್ನು ಏರ್ಪಡಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕರಾದ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕoತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಮತ್ತು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ. ಸುಧಾಕರ್ ಇವರುಗಳು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.

Sant Sevalal Jayanti ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಬಂಜಾರ ಸಂಘದ ಉಪಾಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಯುವ ಲೇಖಕ ಹಾಗೂ ಬಂಜಾರ ಸಂಸ್ಕೃತಿ ಚಿಂತಕ ರುದ್ರು ಪುನೀತ್‍ರವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...