Tuesday, April 29, 2025
Tuesday, April 29, 2025

Siddaramaiah ಒಟ್ಟಾರೆ ನಮ್ಮದು ಜನಪರ ಬಜೆಟ್.ರಾಜ್ಯದ ಎಲ್ಲಾ ಜಿಲ್ಲೆಗಳನ್ನ ಬೆಳೆಸುವ ಕೆಲಸ ಮಾಡಿದ್ದೇವೆ-ಸಿದ್ಧರಾಮಯ್ಯ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25 ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಬಸವಣ್ಣನವರು ಸಮಾನತೆಯ ಕನಸು ಕಂಡಿದ್ದವರು. ಸಮಸಮಾಜಕ್ಕಾಗಿ ಚಳವಳಿ ಮಾಡಿದವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದೇವೆ. ಕೇಂದ್ರ ಬಿಜೆಪಿ
ಸರ್ಕಾರದ ಅವಧಿಯದ್ದು ಶೇ 5.8% ಸರ್ಕಾರ. ನಮ್ಮದು ಶೇ 2.95% ವಿತ್ತೀಯ ಕೊರತೆ (ಫಿಸ್ಕಲ್ ಡೆಫಿಸಿಟ್) ಇದೆ. ಒಟ್ಟಾರೆ ನಮ್ಮದು ಜನಪರ ಬಜೆಟ್. ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸಮಾನವಾಗಿ ಬೆಳೆಸುವ ಕೆಲಸ ಮಾಡಿದ್ದೇವೆ ಎಂದು ಹೇಳಿದರು.

ರೂ. 1,20,000 ಕೋಟಿ ಅಭಿವೃದ್ಧಿಗೆ ಖರ್ಚು ಮಾಡಿದರೆ ಅದು ಅಭಿವೃದ್ಧಿಪೂರಕ ಬಜೆಟ್. 52,009 ಕೋಟಿ ಬಡವರಿಗೆ ಖರ್ಚು ಮಾಡಿದ್ದೇವೆ, ಅದು ಕೂಡ ಅಭಿವೃದ್ಧಿಗೆ ಪೂರಕವಾಗಿರುವಂಥದ್ದು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಿಂದಿನ ಬಜೆಟ್‌ನಲ್ಲಿ ರೂ.77,750 ಕೋಟಿ ರೂ.ಗಳ ಸಾಲ, 23 ಸಾವಿರ ಕೋಟಿ ರೂ.ಗಳ ಋಣೇತರ ಸ್ವೀಕೃತಿಗಳಾಗಿದೆ. ಕೇಂದ್ರ ಸರ್ಕಾರ 16.85 ಲಕ್ಷ ಕೋಟಿ ಈ ವರ್ಷಕ್ಕೆ ಸಾಲ ಮಾಡಿದೆ.

ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ
ಅವರು ಬಿಜೆಪಿ
ಜೊತೆ ಮೈತ್ರಿ ಮಾಡಿಕೊಂಡು ಈಗ ಬಿಜೆಪಿ ವಕ್ತಾರ ಆಗಿಬಿಟ್ಟಿದ್ದಾರೆ.

Siddaramaiah ರೂ. 3,71,383 ಕೋಟಿ ಗಾತ್ರದ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 3 ಸಾವಿರ ಕೋಟಿ (1%ಕ್ಕಿಂತ ಕಡಿಮೆ) ಕೊಡಲಾಗಿದೆ. ಎಸ್.ಸಿ.ಪಿ /ಟಿ.ಎಸ್‍.ಪಿ ಯಲ್ಲಿ 2017-18 ರಲ್ಲಿ 30 ಸಾವಿರ ಕೋಟಿ ನೀಡಲಾಗಿತ್ತು. ಕಳೆದ ಜುಲೈ ಬಜೆಟ್ ನಲ್ಲಿ ರೂ. 34 ಸಾವಿರ ಕೋಟಿ ಕೊಡಲಾಗಿತ್ತು. ಈಗ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ರೂ.39 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ.
ನರೇಂದ್ರ ಮೋದಿ
ಅವರು ಬಾಯಿಯಲ್ಲಿ ಮಾತ್ರ ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್ ಎನ್ನುತ್ತಾರೆ. ಎಲ್ಲದರಲ್ಲೂ ಧಾರ್ಮಿಕ ದ್ವೇಷ ಹುಡುಕುವ ಬಿಜೆಪಿಗೆ ಕಾಮಾಲೆ ರೋಗ ಬಂದಿರಬಹುದು.

ಬೆಂಗಳೂರಿಗೆ ಹೆಚ್ಚು ಕಾರ್ಯಕ್ರಮಗಳನ್ನು ನೀಡಲಾಗಿದೆ. ಬಿಜೆಪಿ ಸರ್ಕಾರ ಬೆಂಗಳೂರನ್ನು ನಿರ್ಲಕ್ಷ್ಯ ಮಾಡಿತ್ತು. ಈ ಬಾರಿ ಹೆಚ್ಚು ಯೋಜನೆ ಕೊಡಲಾಗಿದೆ. ಬ್ರ್ಯಾಂಡ್ ಬೆಂಗಳೂರು 1.50 ಕೋಟಿ ಜನರಿದ್ದು, ಅವರಿಗೆ ಮೂಲಭೂತ ಸೌಕರ್ಯಕ್ಕೆ ಅನುದಾನ ನೀಡಲಾಗಿದೆ.
ಹೈದರಾಬಾದ್ ಕರ್ನಾಟಕ್ಕೆ 1,500 ಕೋಟಿ ರೂ.ಗಳು ಈವರೆಗ ವೆಚ್ಚವಾಗಿದ್ದು, ಈ ಬಾರಿ ಕ್ರಿಯಾ ಯೋಜನೆಯನ್ನು ಏಪ್ರಿಲ್ ನಲ್ಲಿಯೇ ತಯಾರಿಸಿ ಹೆಚ್ಚು ವೆಚ್ಚ ಮಾಡಲಾಗುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Yadav School of Chess Institute ಯಾದವ ಸಂಸ್ಥೆಯಿಂದ ಚೆಸ್ ತರಬೇತಿ ಶಿಬಿರ

Yadav School of Chess Institute ರವೀದ್ರನಗರದ ಯಾದವ ಸ್ಕೂಲ್ ಆಫ್...

Shivaganga Yoga Center ನಗರದ ಅತಿದೊಡ್ಡ ಬಾಡಾವಣೆಗಳಿಗೆ ₹140 ಕೋಟಿ ಅನುದಾನದಿಂದ ಅಭಿವೃದ್ಧಿ- ವಿಶ್ವಾಸ್

Shivaganga Yoga Center ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ...

Sarva Samriddhi Sadhana Center ರಿಪ್ಪನ್ ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ ಕೇಂದ್ರದಲ್ಲಿ ಮಕ್ಕಳಿಗಾಗಿ ಸಂಸ್ಕಾರ ಶಿಬಿರ

Sarva Samriddhi Sadhana Center ಹೊಸನಗರದ ರಿಪ್ಪನ್‌ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ...