INC Karnataka ತಮ್ಮ ಸಹೋದರನ ಪುತ್ರ ಅಜಿತ್ ಪವಾರ್‌ಗೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ನೀಡುವ ಭಾರತದ ಚುನಾವಣಾ ಆಯೋಗ (ಇಸಿಐ) ಮತ್ತು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ನಿರ್ಧಾರದ ಬಗ್ಗೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸ್ಥಾಪಕ ಶರದ್ ಪವಾರ್ ಅವರು ಶನಿವಾರ ಪ್ರತಿಕ್ರಿಯಿಸಿದ್ದಾರೆ.
ರಾಜಕೀಯ ಪಕ್ಷ ಕಟ್ಟಿದವರನ್ನು ಪಕ್ಷದಿಂದಲೇ ತೆಗೆದುಹಾಕುವಂಥ ಘಟನೆ ಹಿಂದೆಂದೂ ನಡೆದಿರಲಿಲ್ಲ’ ಎಂದು ಶರದ್ ಪವಾರ್ ಆಕ್ರೋಶ ಹೊರಹಾಕಿದ್ದಾರೆ.
ಈ ನಿರ್ಧಾರವು ಕಾನೂನಿಗೆ ವಿರುದ್ಧವಾಗಿದೆ’ ಎಂದು ಪ್ರತಿಪಾದಿಸಿದ ಎನ್‌ಸಿಪಿ ಸಂಸ್ಥಾಪಕರು, ಇಸಿಐ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿರುವುದಾಗಿ ಹೇಳಿದರು.
‘ರಾಜಕೀಯ ಪಕ್ಷ ಕಟ್ಟಿದವರನ್ನು ಪಕ್ಷದಿಂದ ತೆಗೆದು ಹಾಕಿರುವ ಘಟನೆ ಹಿಂದೆಂದೂ ನಡೆದಿರಲಿಲ್ಲ. ಅಷ್ಟೇ ಅಲ್ಲ ಪಕ್ಷದ ಚಿಹ್ನೆಯನ್ನೂ ಕಸಿದುಕೊಳ್ಳಲಾಗಿದೆ. ಈ ನಿರ್ಧಾರ ಕಾನೂನಿಗೆ ಅನುಗುಣವಾಗಿಲ್ಲ. ಈ ವಿಚಾರದಲ್ಲಿ ನಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದೇವೆ. ನಾವು ನಮ್ಮ ಸಾರ್ವಜನಿಕ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸಬೇಕಾಗಿದೆ’ ಎಂದು ಶರದ್ ಪವಾರ್ ಹೇಳಿದ್ದಾರೆ.
INC Karnataka ಎನ್‌ಸಿಪಿ ಹೆಸರು ಮತ್ತು ಚಿಹ್ನೆಯನ್ನು ಕಳೆದುಕೊಳ್ಳುವ ಬಗ್ಗೆ ನಾವು ಚಿಂತಿಸುವುದಿಲ್ಲ’ ಎಂದು ಹೇಳುವ ಮೂಲಕ ಶರದ್ ಪವಾರ್ ಅವರು ಅವರು ಜೂನಿಯರ್ ಪವಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ‘ಆದರೆ, ಜನರು ಬೇರೆ ದಾರಿಯಲ್ಲಿ ಹೋಗಲು ಆಯ್ಕೆ ಮಾಡಿದವರನ್ನು ಒಪ್ಪುವುದಿಲ್ಲ ಎಂದು ಪ್ರತಿಪಾದಿಸಿದರು.