Friday, March 20, 2026
Friday, March 20, 2026

Veerashaiva Lingayat ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ವಿಜಯಾನಂದ ಕಾಶಪ್ಪನವರ್

Date:

Veerashaiva Lingayat ಇತ್ತೀಚಿಗಷ್ಟೇ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಶಾಸಕ ವಿಜಯಾನಂದ ಕಾಶಪ್ಪನವರ್‌ ಅವರನ್ನು ಈಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿದ್ದು, ಈ ಹಿಂದಿನ ನೇಮಕ ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ.

ವಿಜಯಾನಂದ ಕಾಶಪ್ಪನವರ್‌ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿರುವುದನ್ನು ರದ್ದುಗೊಳಿಸಿ, ಮಾನ್ಯ ಶಾಸಕರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿ, ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

Veerashaiva Lingayat ಕಳೆದ ಜನವರಿ 27ರಂದು ರಾಜ್ಯ ಸರ್ಕಾರ, 35 ಶಾಸಕರನ್ನು ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಅದರಲ್ಲಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್‌ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿತ್ತು. ಆದರೆ ಕ್ರೀಡಾ ಪ್ರಾಧಿಕಾರದ ಬೈಲಾದಲ್ಲಿ ಇದಕ್ಕೆ ಅವಕಾಶವಿಲ್ಲ. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಬೈಲಾದ ನಿಯಮದ ಪ್ರಕಾರ ಸಚಿವರೇ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗುತ್ತಾರೆ. ಅಂದರೆ ಈಗ ಕ್ರೀಡಾ ಸಚಿವರಾಗಿರುವ ನಾಗೇಂದ್ರ ಅವರೇ ಅಧ್ಯಕ್ಷರು. ಬೇಕಿದ್ದರೆ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಬಹುದು.
ಇದನ್ನು ಅರ್ಥ ಮಾಡಿಕೊಂಡ ರಾಜ್ಯ ಸರ್ಕಾರ, ವಿಜಯಾನಂದ ಕಾಶಪ್ಪನವರ್‌ ಅವರನ್ನು ಈಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...