Shadakshari C S ಫೆ. 27 ರ ಮಂಗಳವಾರ ಬೆಂಗಳೂರಿನ ಮೇಖ್ರಿ ಸರ್ಕಲ್ ಹತ್ತಿರವಿರುವ ಅರಮನೆ ಮೈದಾನದ ಗೇಟ್ ನಂ 1 ರ ಕೃಷ್ಣ ವಿಹಾರದಲ್ಲಿ ‘ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ‘ಕಾರ್ಯಾಗಾರ’ವನ್ನು ಆಯೋಜಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಸೋಮವಾರ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಈ ಬಗ್ಗೆ ವಿವರ ನೀಡಿದರು.
ಮಹಾಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಂದು ಬೆಳಗ್ಗೆ 10:30 ಕ್ಕೆ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರು, ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು ಎರಡು ಲಕ್ಷ ಸರ್ಕಾರಿ ನೌಕರರು ಸಮ್ಮೇಳನ ಹಾಗೂ ಕಾರ್ಯಾಗಾರದಲ್ಲಿ ಭಾಗವಹಿಸುತ್ತಿದ್ದಾರೆ.
ಶಿವಮೊಗ್ಗದಿಂದ 100 ಬಸ್‌ನಲ್ಲಿ ನೌಕರರು ತೆರಳುವರು. ಮಹಾ ಸಮ್ಮೇಳನದಲ್ಲಿ ಭಾಗವಹಿಸುವ ನೌಕರರಿಗೆ ಬಸ್ ವ್ಯವಸ್ಥೆ ಮತ್ತು ಎರಡು ದಿನ ಓಓಡಿ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಸಮ್ಮೇಳನದಲ್ಲಿ ಸರ್ಕಾರಿ ನೌಕರರ ಸಂಘದ ಈ ಕೆಳಕಂಡ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡಿಸಲಾಗುವುದು.
Shadakshari C S 7ನೇ ವೇತನ ಆಯೋಗದಿಂದ ವರದಿ ಪಡೆದು, ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸುವುದು, ಎನ್.ಪಿ.ಎಸ್ ರದ್ದುಪಡಿಸಿ ಓ.ಪಿ.ಎಸ್ ಮರುಸ್ಥಾಪಿಸುವ ಸಲುವಾಗಿ ಮೊದಲನೇ ಹಂತದಲ್ಲಿ ಎನ್.ಪಿ.ಎಸ್. ನೌಕರರ ವೇತನದಲ್ಲಿ ಕಟಾವಣೆಯಾಗುತ್ತಿರುವ ವಂತಿಗೆಯನ್ನು ಏಪ್ರಿಲ್ 2024 ರಿಂದ ಕಡಿತಗೊಳಿಸದಂತೆ ಸರ್ಕಾರಿ ಆದೇಶ ಹೊರಡಿಸುವುದು, ರಾಜ್ಯ ಸರ್ಕಾರಿ ನೌಕರರು ಮತ್ತು ಅವಲಂಭಿತ ಕುಟುಂಬ ಸದಸ್ಯರಿಗೆ ನಗದುರಹಿತ ಆರೋಗ್ಯ ಚಿಕಿತ್ಸೆ ಒದಗಿಸುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (ಕೆ.ಎ.ಎಸ್.ಎಸ್) ಯನ್ನು ಶೀಘ್ರ ಅನುಷ್ಠಾನಗೊಳಿಸುವ ಬಗ್ಗೆ ಸರಕಾರವನ್ನು ಆಗ್ರಹಿಸಲಾಗುವುದು ಎಂದು ಹೇಳಿದರು.