Constitution Awareness Jatha ತೀರ್ಥಹಳ್ಳಿ ತಾಲ್ಲೂಕು ಕುಡುಮಲ್ಲಿಗೆ ಗ್ರಾಮ ಪಂಚಾಯಿತಿಗೆ ಆಗಮಿಸಿದ ಸಂವಿಧಾನ ಜಾಥಾವನ್ನು ಮಹಿಳೆಯರ ಪೂರ್ಣಕುಂಭ , ಬೈಕ್ ರ್ಯಾಲಿ, ವಿದ್ಯಾರ್ಥಿಗಳ ಬಲೂನ್ ಜಾಥಾ ಹಾಗೂ ಮಕ್ಕಳ ಪಥ ಸಂಚಲನದ ಮೂಲಕ ಬರಮಾಡಿಕೊಳ್ಳಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಬಿ.ಎಂ ಕಾರ್ಯಕ್ರಮ ಉದ್ಘಾಟಿಸಿದರು. ಸಂವಿಧಾನ ಪೀಠಿಕೆಯನ್ನು ಸುಜಾತ ರವರು ವಾಚಿಸಿದರು.
Constitution Awareness Jatha ಉಪಾಧ್ಯಕ್ಷರು ,ಚುನಾಯಿತ ಪ್ರತಿನಿಧಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯ್ತಿ ಕಾರ್ಯದರ್ಶಿಗಳು ಹಾಜರಿದ್ದರು. ಸಂವಿಧಾನ ಜಾಥಾ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪ್ರಬಂಧ ಸ್ಫರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಮತ್ತು ಶಾಲಾ ಮಕ್ಕಳಿಂದ ಸಾಂಸ್ಕoತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.