Friday, March 20, 2026
Friday, March 20, 2026

Blacklist show ಪಂಚಾಯತ್ ನೌಕರರಿಂದ ಮಾರ್ಚ್ 1ರಿಂದ ಕರ್ತವ್ಯ ಮಾಡುತ್ತಲೇ ಕಪ್ಪುಪಟ್ಟಿ ಪ್ರದರ್ಶನ

Date:

Blacklist show ರಾಜ್ಯಮಟ್ಟದಲ್ಲಿ ಪಂಚಾಯತ್ ನೌಕರರು ಮಾರ್ಚ್ 1 ರಿಂದ ತಮಗಾಗುತ್ತಿರುವ ನೋವು, ಶೋಷಣೆ ಮತ್ತು ಸಮಸ್ಯೆಗಳ ವಿರುದ್ದ ಸಾರ್ವಜನಿಕ ಸೇವೆಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕಚೇರಿಯಲ್ಲಿ ಸಾರ್ವಜನಿಕವಾಗಿ ಕಪ್ಪು ಬಟ್ಟೆ/ ಕಪ್ಪು ಪಟ್ಟಿ ಧರಿಸಿ ಇಲಾಖೆಯಿಂದ ಬೇಡಿಕೆ ಈಡೇರುವವರೆಗೂ ಶಾಂತಿಯುತ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಬೊಳ್ಮ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಹಾಗೂ ಸಿಬ್ಬಂದಿಗಳು ಹಲವಾರು ವರ್ಷಗಳಿಂದ ಸಂಘಟನೆಯ ಮೂಲಕ ಇಲಾಖೆಗೆ ಹಲವಾರು ಬೇಡಿಕೆಗಳನ್ನು ಮಂಡಿಸುತ್ತಾ ಬಂದಿದ್ದಾರೆ. ಆದರೆ ಇಲಾಖೆಯು ನೌಕರರ ಮೂಲ ಬೇಡಿಕೆಗಳಾದ ಸಿ ಮತ್ತು ಡಿ ದರ್ಜೆಯ ವೇತನ ಶ್ರೇಣಿ, ಆರೋಗ್ಯ ಭದ್ರತೆ, ಅನುಮೋದನೆ ಆಗದಿರುವ ಬಿಲ್ಲ್ ಕಲೆಕ್ಟರ್ , ಕ್ಲರ್ಕ್ ಕಮ್ ಡಿಇಒ, ವಾಟರ್ ಮ್ಯಾನ್, ಶುಚಿತ್ವ ನೌಕರ, ಅಟೆಂಡರ್ ವೃಂದದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸೇವಾ ಭದ್ರತೆ, ಡಾಟಾ ಎಂಟ್ರಿ ಆಪರೇಟರ್ ಗಳ ಅನುಮೋದನೆ ಸಮಸ್ಯೆ, ಸಕಾಲ ಮುಂಬಡ್ತಿ, ನಿವೃತ್ತಿಯಲ್ಲಿ ಆರ್ಥಿಕ ಭದ್ರತೆಗಳನ್ನು ಈಡೇರಿಸದೆ ನೌಕರರನ್ನು ಹಗಲಿರುಳು ದುಡಿಸಿಕೊಳ್ಳುತ್ತಿದ್ದು, ನೌಕರರು ಶೋಷಣೆಗೊಳಗಾಗುತ್ತಿದ್ದು ಆರೋಗ್ಯ ಭದ್ರತೆ ಇಲ್ಲದೆ ಒತ್ತಡದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ.

ಆದಾಗ್ಯೂ, ಇಲಾಖೆಯು ನೌಕರರ ಸ್ಥಿತಿಗತಿಗಳನ್ನು ಗಣನೆಗೆ ತೆಗೆದುಕೊಳ್ಳದೆ ಅಸಡ್ಡೆ ಮತ್ತು ಮಲತಾಯಿ ಧೋರಣೆ ತೋರುತ್ತಿದ್ದು, ಆದ್ದರಿಂದ ಮುಂದಿನ ತಿಂಗಳಿನಿಂದ ಕಪ್ಪು ಬಟ್ಟೆ/ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ಕೈಗೊಳ್ಳಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Blacklist show ಮುಖ್ಯ ಬೇಡಿಕೆಗಳು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಬದಲು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ಸಿ ಮತ್ತು ಡಿ ದರ್ಜೆಯ ವೇತನ ಶ್ರೇಣಿ ನಿಗದಿಪಡಿಸಬೇಕು, ಗ್ರಾಮ ಪಂಚಾಯಿತಿ ನೌಕರರಿಗೆ ಕಳೆದ ಮೂರು ದಶಕಗಳಿಂದ ಆರೋಗ್ಯ ಭದ್ರತೆ ಇಲ್ಲ ಆದ್ದರಿಂದ ಆರೋಗ್ಯ ಭದ್ರತೆ ಒದಗಿಸಬೇಕು, ಗ್ರಾಮ ಪಂಚಾಯತ್ ನೌಕರರಿಗೆ ನಿವೃತ್ತಿಯಾದಾಗ ಮಾಸಿಕ ನಿವೃತ್ತಿ ಉಪಧನ ಮಂಜೂರು ಮಾಡಬೇಕು, . ಜಿಲ್ಲಾ ಪಂಚಾಯತ್ ಅನುಮೋದನೆ ಯಾಗದೆ ಕಾರ್ಯನಿರ್ವಹಿಸುತ್ತಿರುವ ಅಂತ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ನೌಕರರಿಗೆ ಜಿಲ್ಲಾ ಪಂಚಾಯತ್ ಅನುಮೋದನೆ ಒದಗಿಸಬೇಕು, ಹಾಗು ಜಿಲ್ಲಾ ಪಂಚಾಯತ್ ಜೇಸ್ಟತಾ ಪಟ್ಟಿಯಲ್ಲಿರುವಂತ ಎಲ್ಲಾ ಗ್ರಾಮ ಪಂಚಾಯತ್ ನೌಕರರ ಹುದ್ದೆಯಿಂದ ಗ್ರೇಡ್-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ಮುಂಬಡ್ತಿ ನೀಡಬೇಕು ಎಂದು
ದೇವಿಪ್ರಸಾದ್ ಬೊಳ್ಮ ಅವರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...