Thursday, March 19, 2026
Thursday, March 19, 2026

KB Prasanna Kumar ಶಿವಮೊಗ್ಗ ಮಹಾನಗರ ಪಾಲಿಕೆಗೆ ಕೂಡಲೇ ಚುನಾವಣೆ ನಡೆಸಿ- ಕೆ.ಬಿ.ಪ್ರಸನ್ನ ಕುಮಾರ್

Date:

KB Prasanna Kumar ಶಿವಮೊಗ್ಗ ಮಹಾನಗರ ಪಾಲಿಕೆಗೆ ಶೀಘ್ರ ಚುನಾವಣೆ ನಡೆಸಬೇಕು ಎಂದು ಜೆಡಿಎಸ್ ಕೋರ್ ಕಮಿಟಿಯ ರಾಜ್ಯ ಸದಸ್ಯ ಕೆ.ಬಿ.ಪ್ರಸನ್ನಕುಮಾರ್ ಹೇಳಿದರು.
ಅವರು ಇಂದು ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರದಲ್ಲಿ ಅನೇಕ ಸಮಸ್ಯೆಗಳು ಹಾಗೆ ಉಳಿದಿವೆ. ಪಾಲಿಕೆ ಸದಸ್ಯರ ಅವಧಿ ಮುಗಿದು 4 ತಿಂಗಳಾಗಿದೆ. ನಗರದ ಅಭಿವೃದ್ದಿಯ ದೃಷ್ಠಿಯಿಂದ ಪಾಲಿಕೆ ಕೂಡಲೇ ಚುನಾವಣೆ ನಡೆಸಬೇಕು ಎಂದರು.
ಪಾಲಿಕೆ ವ್ಯಾಪ್ತಿಗೆ ಈಗ 22 ವರ್ಷಗಳ ಹಿಂದೆಯೇ ಮಲವಗೊಪ್ಪ, ಗಾಡಿಕೊಪ್ಪ, ಬೊಮ್ಮನಕಟ್ಟೆ, ಮಲ್ಲಿಗೇನಹಳ್ಳಿ ಸೇರಿದಂತೆ ಇತರೆ ಗ್ರಾಮಗಳನ್ನು ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿತ್ತು. ಈಗ ಮತ್ತೆ ಪಾಲಿಕೆ ವ್ಯಾಪ್ತಿಗೆ ಸೋಗಾನೆ, ಗೋವಿಂದಪುರ, ಅನುಪಿನಕಟ್ಟೆ ಮುಂತಾದ ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳನ್ನು ಸೇರಿಸುವ ಚರ್ಚೆ ನಡೆದಿದೆ. ಈಗಾಗಲೇ ಪಾಲಿಕೆಗೆ ಸರ್ಕಾರದಿಂದ ಪತ್ರ ಕೂಡ ಬಂದಿದೆ ಎಂದರು.


ಆದರೆ, ಈ ಹಿಂದೆ ನಗರಸಭಾ ವ್ಯಾಪ್ತಿಗೆ ಸೇರಿದ್ದ ಪ್ರದೇಶಗಳ ಅಭಿವೃದ್ಧಿಯೇ ಇನ್ನೂ ಆಗಿಲ್ಲ. ಮೂಲಭೂತ ಸೌಲಭ್ಯಗಳು ಆ ಗ್ರಾಮಗಳಿಗೆ ಕಲ್ಪಿಸಿಲ್ಲ. ಹೊಸದಾಗಿ ಗ್ರಾಮಗಳನ್ನು ಸೇರಿಸುವ ಮುನ್ನಾ ಈಗಾಗಲೇ ಸೇರಿಸಿರುವ ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‍ನ್ನು ಘೋಷಣೆ ಮಾಡಿ ನಂತರ ಸೇರಿಸಬೇಕು ಎಂದರು.
ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ರೈತರು ವ್ಯವಸಾಯ ಮಾಡುತ್ತಾ ಬಂದಿದ್ದಾರೆ. ಆದರೆ ಈಗ ಅವರನ್ನು ಒಕ್ಕಲೆಬ್ಬಿಸುವ ಕೆಲಸ ನಡೆದಿದೆ. ಯಾವುದೇ ಕಾರಣಕ್ಕೂ ಅವರನ್ನು ಒಕ್ಕಲೆಬ್ಬಿಸಬಾರದು. ಈಗಾಗಲೇ ಅಲ್ಲಿ ಬ್ರೋಕರ್‍ಗಳ ಹಾವಳಿ ಜಾಸ್ತಿಯಾಗಿದೆ ಅದನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿದರು.


KB Prasanna Kumar ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ನಗರಾಧ್ಯಕ್ಷ ದೀಪಕ್‍ಸಿಂಗ್ ಪ್ರಮುಖರಾದ ಅಬ್ದುಲ್ ವಾಜೀದ್, ಬೊಮ್ಮನಕಟ್ಟೆ ಮಂಜುನಾಥ್, ವೆಂಕಟೇಶ್, ಪುಷ್ಪ, ವಿನಯ್ ಸೇರಿದಂತೆ ಹಲವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...