Karnataka SSLC Examination 2024-25ನೇ ಸಾಲಿನ ದ್ವಿತೀಯ ಪಿಯುಸಿ (2nd PUC Exam) ಹಾಗೂ ಎಸ್‌ಎಸ್‌ಎಲ್‌ಸಿ(SSLC exam) ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ವಿಕಾಸಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಪರೀಕ್ಷಾ ದಿನಾಂಕ ಹಾಗೂ ಪರೀಕ್ಷೆಗಳಿಗೆ ಸಂಬಂಧಪಟ್ಟ ಇತರ ಮಾಹಿತಿಗಳನ್ನು ನೀಡಿದರು.
ದ್ವಿತೀಯ ಪಿಯುಸಿ ಪರೀಕ್ಷೆ ) ಮಾರ್ಚ್ 01 ರಿಂದ 22ರ ವರೆಗೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ ಎಂದು ತಿಳಿಸಿದರು.
Karnataka SSLC Examination ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ.