Brahmin students application for scholarship ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ಸಕಾಲದಲ್ಲಿ ನೀಡುವ ಸಾಂದೀಪನಿ ಶಿಷ್ಯವೇತನ ಯೋಜನೆಯನ್ನು ಮಾರ್ಚ್ 1ರವರೆಗೆ ವಿಸ್ತರಿಸಲಾಗಿದೆ.
ಸಾಂದೀಪನಿ ಶಿಷ್ಯವೇತನ ಯೋಜನೆಯ ಅಡಿಯಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅಂದರೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 15,000 ರೂ.ವರೆಗೆ ವಿದ್ಯಾರ್ಥಿವೇತನ ನೀಡಲಾಗುವುದು. ಇನ್ನೂ ಸಿಇಟಿ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದ ಒಟ್ಟು ಮೊತ್ತದ 2/3 ಭಾಗ ಅಥವಾ ಗರಿಷ್ಠ ರೂ.1 ಲಕ್ಷದವರೆಗೆ ಶಿಷ್ಯವೇತನ ನೀಡಲು ಉದ್ದೇಶಿಸಲಾಗಿದೆ.
Brahmin students application for scholarship ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಸಮುದಾಯದ ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.