Thursday, June 18, 2026
Thursday, June 18, 2026

Gopal Krishna Belur ಕುಮಾರ್ ಬಂಗಾರಪ್ಪ ಅವರನ್ನ ಬಿಎಸ್ ವೈ ಕಟ್ಟಿಹಾಕಿಕೊಂಡಿದ್ದಾರೆ.ಆದರೂ‌ ಪ್ರಯತ್ನ ಮಾಡಿದೆವು- ಬೇಳೂರು ಗೋಪಾಲಕೃಷ್ಣ

Date:

Gopal Krishna Belur ಮಾಜಿ ಸಚಿವ ಕುಮಾರ ಬಂಗಾರಪ್ಪನವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ಕೈಗಾರಿಕ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕುಮಾರ ಬಂಗಾರಪ್ಪ ಕಾಂಗ್ರೆಸ್ ಪಕ್ಷ ಸೇರ್ಪಡೆ ಕುರಿತು ಮಾತುಕತೆ ನಡೆಯುತ್ತಿದೆ. ಯಡಿಯೂರಪ್ಪನವರು ಪಕ್ಷ ಬಿಡದಂತೆ ಕಟ್ಟಿಹಾಕೊಂಡಿದ್ದಾರೆ. ನಾವು ಹಗ್ಗ ಕಟ್ಟಲು ಹೋಗಿದ್ದೆವು. ಹಗ್ಗ ಕಟ್ ಆಗಿದೆ ಎಂದರು.

ಪಕ್ಷ ಅಂತಾ ಬಂದಾಗ ಸಹೋದರ ಅಂತ ಬರಲ್ಲ ಎಂದು ಕುಮಾರ ಬಂಗಾರಪ್ಪ ಸೇರ್ಪಡೆ ಕುರಿತು ಮಧು ಬಂಗಾರಪ್ಪ ಆಕ್ಷೇಪ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿದರು. ಅದೇ ರೀತಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ ಆಗುವ ಸಾಧ್ಯತೆ ಇದೆ ಎಂದರು.

Gopal Krishna Belur ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತಕುಮಾರ ಹೆಗಡೆ ಏಕವಚನ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಜನಪ್ರತಿನಿಧಿಗಳು ಜ್ಞಾನ ಇಟ್ಟುಕೊಂಡು ಮಾತಾಡಬೇಕು. ಹಿರಿಯ ಸಂಸದರು ಗೌರವದಿಂದ ಇರಬೇಕು. ಅನಂತ ಕುಮಾರ ಹೆಗಡೆ ಹತಾಶರಾಗಿ ಮಾತನಾಡುತ್ತಿದ್ದಾರೆ. ಸಂಸದ ಅನಂತಕುಮಾರ್ ಹೆಗಡೆ ತಲೆಕೆಟ್ಟಿದೆ. ಅವರಿಗೆ ಟಿಕೆಟ್ ಸಿಗಲ್ಲ ಅಂತ ಹೀಗೆ ಮಾತನಾಡುತ್ತಿದ್ದಾರೆ ಟೀಕಿಸಿದರು.

ಇನ್ನು ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವನ್ನು ಬೇಳೂರು ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...