Saturday, June 20, 2026
Saturday, June 20, 2026

Mullayanagiri Peak ಕಾಡ್ಗಿಚ್ಚಿಗೆ ಆಹುತಿಯಾದ ಮುಳ್ಳಯ್ಯನಗಿರಿಯ ನೂರಾರು ಎಕರೆ ಅರಣ್ಯ

Date:

Mullayanagiri Peak ಚಿಕ್ಕಮಗಳೂರು ತಾಲೂಕಿನ ವಿಶ್ವ ಪ್ರಸಿದ್ಧ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚುಹೊತ್ತಿಕೊಂಡ ಪರಿಣಾಮ ನೂರಾರು ಎಕರೆ ಪ್ರದೇಶದಲ್ಲಿದ್ದ ಅಪರೂಪದ ಸಸ್ಯ ಸಂಪತ್ತು ಸುಟ್ಟು ಭಸ್ಮವಾಗಿರುವಂತಹ ಘಟನೆ ನಡೆದಿದೆ.
ಮುಳ್ಳಯ್ಯನಗಿರಿ ಸಮೀಪದ ಬೈರೇಗುಡ್ಡ ಎಂಬಲ್ಲಿ ಕಾಡಿಗೆ ಬೆಂಕಿ ಬಿದ್ದಿದ್ದು, ನೂರಾರು ಎಕರೆ ಅರಣ್ಯ ಸುಟ್ಟು ಬೂದಿಯಾಗಿದೆ. ಬೈರೇಗುಡ್ಡ ಸಮೀಪ ಹೊತ್ತಿದ ಕಾಡ್ಗಿಚ್ಚು ಕವಿಕಲ್ ಗಂಡಿ ಅರಣ್ಯದವರೆಗೂ ಗುಡ್ಡದಿಂದ ಗುಡ್ಡಕ್ಕೆ ವ್ಯಾಪಿಸಿದೆ. ಕಾಡ್ಗಿಚ್ಚಿನ ಸ್ಥಳಕ್ಕೆ ಹೋಗಲಾರದೇ ಅರಣ್ಯಾಧಿಕಾರಿಗಳು ಪರದಾಡುವಂತಾಗಿದೆ.

ಬೈರೇಗುಡ್ಡ ಅತ್ಯಂತ ಎತ್ತರ, ಅರಣ್ಯ ಹಾಗೂ ಇಳಿಜಾರಿನ ಪ್ರದೇಶವಾಗಿದೆ. ಮುಳ್ಳಯ್ಯನಗಿರಿಯಲ್ಲಿ ಬೀಸುವ ಭಾರೀ ಗಾಳಿಗೆ ಬೆಂಕಿಯ ಕೆನ್ನಾಲಿಗೆ ಹೆಚ್ಚಿದ್ದರಿಂದ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ.

Mullayanagiri Peak ಅರಣ್ಯಾಧಿಕಾರಿಗಳು ಸ್ಥಳದಲ್ಲೇ ಇದ್ದರೂ ಕೂಡ ಬೆಂಕಿಯನ್ನ ನಂದಿಸಲು ಸಾಧ್ಯವಾಗಿಲ್ಲ. ಅತ್ಯಂತ ಎತ್ತರ ಹಾಗೂ ಇಳಿಜಾರಿನ ಪ್ರದೇಶದ ಬೈರೇಗುಡ್ಡದ ಬಳಿ ಹೋಗಲು ಕಷ್ಟಸಾಧ್ಯ. ಬಿಸಿಲ ಝಳಕ್ಕೆ ಸಂಪೂರ್ಣ ಒಣಗಿ ನಿಂತಿರುವ ಅರಣ್ಯ ಯಾವ ಪ್ರಮಾಣದಲ್ಲಿ ಹೊತ್ತಿ ಉರಿಯುತ್ತದೆ ಎಂದು ಊಹಿಸುವುದು ಕಷ್ಟವಾಗಿದೆ. ಹಾಗಾಗಿ, ಅರಣ್ಯಾಧಿಕಾರಿಗಳು ಕೂಡ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅರಣ್ಯಕ್ಕೆ ಸ್ಥಳೀಯರೇ ಬೆಂಕಿ ಕೊಟ್ಟಿರಬಹುದು ಎಂದೂ ಶಂಕಿಸಲಾಗಿದೆ.
ಬೇಸಿಗೆಯ ವೇಳೆ ಬಂಡೀಪುರ ಅರಣ್ಯ ಪ್ರದೇಶ, ಮುಳ್ಳಯ್ಯನಗಿರಿ ಗುಡ್ಡಗಾಡು ಪ್ರದೇಶ ಸೇರಿ ರಾಜ್ಯದ ಹಲವೆಡೆ ಕಾಡ್ಗಿಚ್ಚು, ಅಗ್ನಿ ದುರಂತಗಳು ಸಂಭವಿಸುತ್ತವೆ. ಆದರೆ, ಬೇಸಿಗೆ ಆರಂಭಕ್ಕೂ ಮೊದಲೇ ಕಾಡ್ಗಿಚ್ಚು ಆವರಿಸಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...