Lok Sabha Elections ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳು ಒಡ್ಡುವ ಆಶ್ವಾಸನೆಗಳ ಅನುಷ್ಠಾನ ಕಾರ್ಯ ಸಾಧ್ಯತೆ ಬಗ್ಗೆ ಪ್ರಶ್ನಿಸುವ ಹಕ್ಕನ್ನು ಮತದಾರರು ಹೊಂದಿದ್ದಾ ರೆ ಎಂದು ಚುನಾವಣಾ ಆಯೋಗ ಶನಿವಾರ ಸ್ಪಷ್ಟಪಡಿಸಿದೆ.
ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಭರದ ಸಿದ್ಧತೆ ಹಾಗೂ ಇತ್ತೀಚೆಗೆ ನಡೆದ ವಿವಿಧ ವಿಧಾನಸಭೆ ಚುನಾವಣೆಗಳಲ್ಲಿ ಗ್ಯಾರಂಟಿ’ಗಳ ಅಬ್ಬರದ ಹಿನ್ನೆಲೆಯಲ್ಲಿ ಆಯೋಗದ ಸ್ಪಷ್ಟನೆ ಮಹತ್ವ ಪಡೆದಿದೆ. ರಾಜಕೀಯ ಪಕ್ಷಗಳು ತಮ್ಮ ಚುನಾವಣೆ
ಪ್ರಣಾಳಿಕೆಗಳಲ್ಲಿ ಭರವಸೆಗಳನ್ನು ನೀಡುವ ಹಕ್ಕನ್ನು
ಹೊಂದಿವೆ. ಅದೇ ರೀತಿ, ಮತದಾರರೂ ಇಂತಹ ಭರವಸೆಗಳು ಎಷ್ಟು ವಾಸ್ತವಿಕ ಎಂದು ಪರೀಕ್ಷಿಸುವ ಹಕ್ಕು ಹೊಂದಿರುತ್ತಾರೆ. ಇದರ ಭಾಗವಾಗಿ ಅವುಗಳ ಅನುಷ್ಠಾನ ಕಾರ್ಯಸಾಧ್ಯತೆಯನ್ನು ಪ್ರಶ್ನಿಸುವ ಹಕ್ಕು ಹೊಂದಿರುತ್ತಾರೆ. ಆದರೆ, ಪ್ರಸ್ತುತ ಈ ವಿಚಾರ ನ್ಯಾಯಾಲಯದ ಅಂಗಳದಲ್ಲಿದೆ,” ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
Lok Sabha Elections ಏಪ್ರಿಲ್-ಮೇನಲ್ಲಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ವಿವಿಧ ರಾಜ್ಯಗಳಲ್ಲಿ ರಾಜಕೀಯ ಪಕ್ಷಗಳ ಜೊತೆ ಸಮಾಲೋಚನೆ ನಡೆಸುತ್ತಿದೆ. ಇದರ ಭಾಗವಾಗಿ ತಮಿಳುನಾಡಿನ ಪಕ್ಷಗಳ ಜತೆ ಸಭೆ ನಡೆಸಿತು.