Tuesday, November 26, 2024
Tuesday, November 26, 2024

Anant Ambani-Radhika Merchant ಪ್ರಾಣಿಪ್ರಿಯ ಅನಂತ್ ಅಂಬಾನಿ ಮದುವೆ ಪೂರ್ವ ಅದ್ಧೂರಿ ಸಮಾರಂಭ

Date:

Anant Ambani-Radhika Merchant: ವಿಶ್ವದ ಟಾಪ್ ಟೆನ್ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ದಂಪತಿ ಮಗ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಅದ್ಧೂರಿ ತಯಾರಿ ನಡೆಯುತ್ತಿದೆ.
ಸ್ವತಃ ನೀತಾ ಅಂಬಾನಿ ಅವರು ಈ ಸಿದ್ಧತೆಯ ಉಸ್ತುವಾರಿಗಳನ್ನು ನೋಡಿಕೊಳ್ಳುತ್ತಿದ್ದಾರೆ. ಅಂಬಾನಿ ಕುಟುಂಬದಿಂದ ಗುಜರಾತ್‌ನ ಜಾಮ್ ನಗರದಲ್ಲಿ ಹದಿನಾಲ್ಕು ಹೊಸ ದೇಗುಲಗಳ ಸಮುಚ್ಚಯದ ನಿರ್ಮಾಣವನ್ನೇ ಮಾಡಲಾಗಿದೆ. ಸೊಗಸಾಗಿ ಕೆತ್ತನೆ ಮಾಡಿದ ಸ್ಥಂಭಗಳು, ಕಲಾಕೃತಿಗಳು, ದೇವ- ದೇವತೆಗಳ ಚಿತ್ರಗಳು, ಮನಮೋಹಕವಾದ ಶಿಲ್ಪಗಳು, ವಾಸ್ತುಶಿಲ್ಪದಿಂದ ಪ್ರೇರಿತವಾದ ಪಾರಂಪರಿಕ ಚಿತ್ರಗಳನ್ನು ಇಲ್ಲಿ ಕಾಣಬಹುದಾಗಿದೆ.
ಭಾರತದ ಶ್ರೀಮಂತ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಅಸ್ಮಿತೆಯನ್ನು ಈ ದೇವಾಲಯ ಸಮುಚ್ಚಯದ ಎಲ್ಲ ಕಡೆಗಳಲ್ಲಿ ಕಾಣಬಹುದಾಗಿದೆ. ಪರಿಣತರಾದ

Anant Ambani-Radhika Merchant: ಕುಶಲಕರ್ಮಿಗಳು, ಕಲಾವಿದರು ಇದಕ್ಕಾಗಿ ಶ್ರಮಿಸಿದ್ದಾರೆ, ಶ್ರಮಿಸುತ್ತಿದ್ದಾರೆ. ದೇವಾಲಯದ ಕಲಾತ್ಮಕತೆಯನ್ನು ಇನ್ನಷ್ಟು ಸೊಬಗುಗೊಳಿಸುವ ಉದ್ದೇಶದಿಂದ ಸಾಂಪ್ರದಾಯಿಕ ಹಾಗೂ ಹಳೆಯ ತಂತ್ರಗಳನ್ನು ಬಳಸಲಾಗಿದೆ. ಸ್ಥಳೀಯ ಕಲಾವಿದರ ಅದ್ಭುತ ಕೌಶಲ, ಪ್ರತಿಭೆಯನ್ನು ಈ ದೇವಾಲಯ ಸಮುಚ್ಚಯದಲ್ಲಿನ ಕಲಾ ಶ್ರೀಮಂತಿಕೆ ಪ್ರತಿಬಿಂಬಿಸುತ್ತದೆ. ಅದು ಈಗಾಗಲೇ ಗೊತ್ತಿರುವಂತೆ, ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷೆಯೂ ಆಗಿರುವ ನೀತಾ ಅಂಬಾನಿ ಅವರ ದೃಷ್ಟಿಕೋನವೇ ಸ್ಥಳೀಯ ಕಲಾವಿದರಿಗೆ ಉತ್ತೇಜನ, ಪ್ರೋತ್ಸಾಹ ಹಾಗೂ ಅವರ ಜೀವನೋಪಾಯಕ್ಕೆ ಸೂಕ್ತ ಅನುಕೂಲ ಮಾಡಿಕೊಡುವುದಾಗಿದೆ. ಅದರ ಜತೆಗೆ ಭಾರತೀಯ ಪರಂಪರೆ, ಸಂಪ್ರದಾಯ ಹಾಗೂ ಸಂಸ್ಕೃತಿಯನ್ನು ಕಾಪಾಡುವುದು ಹಾಗೂ ಪ್ರಚಾರಮಾಡುವುದು ಇದರ ಉದ್ದೇಶವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Constitution Day ಸಂವಿಧಾನದ ಸಂದೇಶವೇ ನಮ್ಮ ಸರ್ಕಾರದ ಸಿದ್ಧಾಂತ- ಸಿದ್ಧರಾಮಯ್ಯ

Constitution Day ಸಂವಿಧಾನ ದಿನಾಚರಣೆಯ ವಿಶೇಷವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು...

Shivamogga-Bhadravathi Urban Development Authority ಊರುಗಡೂರು ನಿವೇಶನ ಹಂಚಿಕೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಡಿ.5 ಅಂತಿಮ ದಿನಾಂಕ

Shivamogga-Bhadravathi Urban Development Authority ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ...

Shivamogga City Corporation ಒಂದು ತಿಂಗಳಲ್ಲಿ ಏಕರೀತಿಯ ಕರವಸೂಲಾತಿ ಹೊಸ ಕಾಯ್ದೆ ಜಾರಿ- ಸಚಿವ ರಹೀಂ ಖಾನ್

Shivamogga City Corporation ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ಕರವಸೂಲಿ...