Saturday, May 23, 2026
Saturday, May 23, 2026

Accident News ಮೋಟೆಬೆನ್ನೂರು ಬಳಿ ಬೈಕ್ ಹಿಂಬದಿಗೆ ಲಾರಿ ಢಿಕ್ಕಿ,ಮೂರು ಸಾವು

Date:

Accident News ಬೈಕ್ಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ದಂಪತಿ ಹಾಗೂ ಇಬ್ಬರು ಮಕ್ಕಳು ಬೈಕ್ ನಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದರು.

ಮೊಟೇಬೆನ್ನೂರು ಬಳಿ ವೇಗವಾಗಿ ಬಂದ ಲಾರಿ ಬೈಕ್ ಗೆ ಹಿಂಬದಿಯಿಂದ ಗುದ್ದಿದ್ದು ಅಲ್ಲದೆ ಅವರ ದೇಹಗಳ ಮೇಲೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Accident News ಅಪಘಾತದಲ್ಲಿ ಹೆಣ್ಣು ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ.
ಅಪಘಾತದ ಬಳಿಕ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಗುದ್ದಿದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರವಾಗಿದೆ. ಮೃತರನ್ನು ಹಾವೇರಿಯ ನಾಗೇಂದ್ರನಮಟ್ಟಿ ನಿವಾಸಿಗಳಾದ 34 ವರ್ಷದ ಆಸೀಫ್‌ವುಲ್ಲಾ ಮಲ್ಲಾಡದ, 27 ವರ್ಷದ ಅಫ್ರಿನ್‌ಬಾನು ಮಲ್ಲಾಡದ ಹಾಗೂ 6 ವರ್ಷದ ಪುತ್ರ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...