Monday, February 2, 2026
Monday, February 2, 2026

K. Shivram ನಿವೃತ್ತ ಐಎಎಸ್ ಅಧಿಕಾರಿ, ಚಿತ್ರನಟಕೆ.ಶಿವರಾಂ ನಿಧನ

Date:

K. Shivram ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯಾಗಿದ್ದ, ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.
ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ, ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೋದಿ ರಸ್ತೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಲಾಗಿದೆ.

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯಲ್ಲಿ 1953ರಲ್ಲಿ ಜನಿಸಿದ್ದ ಶಿವರಾಮು, 1985ರಲ್ಲಿ ಕೆಎಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಳಿಕ, ಕನ್ನಡದಲ್ಲಿಯೇ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯೂ ಆಗಿದ್ದರು. ಆ ಮೂಲಕ, ಕನ್ನಡದಲ್ಲಿ ಐಎಎಸ್‌ ಬರೆದು, ಅಧಿಕಾರಿಯಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೂ ಭಾಜನರಾಗಿದ್ದಾರು. ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
1993ರಲ್ಲಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದ ಶಿವರಾಮು ಅವರು, ನಾಗತಿಹಳ್ಳಿ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಸಂತ ಕಾವ್ಯ, ಖಳನಾಯಕ, ಸಾಂಗ್ಲಿಯಾನ-3, ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್ ಹಾಗೂ ಟೈಗರ್ ಸಿನಿಮಾಗಳಲ್ಲಿ ನಟಿಸಿದ್ದರು.

K. Shivram 2013ರಲ್ಲಿ ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡಿ, ಸ್ವಯಂ ನಿವೃತ್ತಿ ಪಡೆದ ಅವರು ಕಾಂಗ್ರೆಸ್‌ ಸೇರಿ, ರಾಜಕೀಯ ಆರಂಭಿಸಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಸೋಲುಂಡಿದ್ದರು. ಬಳಿಕ, ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರಿದ್ದರು. ಅಲ್ಲದೆ, ಛಲವಾದಿ ಮಹಸಭಾ ಅಧ್ಯಕ್ಷರೂ ಆಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...