Thursday, March 19, 2026
Thursday, March 19, 2026

Report acceptance meeting ಸಾರ್ವಜನಿಕರು ಲೋಕಾಯುಕ್ತ ಕಾರ್ಯಾಲಯದ ಉಪಯೋಗ ಪಡೆಯಲು ಕರೆ

Date:

Report acceptance meeting ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲು ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಬೇಕು. ಹಾಗೂ ಸಾರ್ವಜನಿಕರು ಸಹ ತಮ್ಮ ಸಮಸ್ಯೆಗಳ ಕುರಿತು ಅರ್ಜಿಗಳನ್ನು ನೀಡಲು ಮುಂದೆ ಬರಬೇಕು ಎಂದು ಕರ್ನಾಟಕ ಲೋಕಾಯುಕ್ತ ಸಬ್ ಇನ್ಸ್‍ಪೆಕ್ಟರ್ ಸುರೇಶ್ ಹೆಚ್ ಎಸ್ ತಿಳಿಸಿದರು.
ಇಂದು ತಾಲ್ಲೂಕು ಪಂಚಯ್ತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿದರು.
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತವಾಗಿ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತಕ್ಕೆ ಅಹವಾಲು ಸಲ್ಲಿಸಬಹುದು. ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಸಂಬಂಧಿಸಿದ ಇಲಾಖೆಗಳಿಗೆ ಕಳುಹಿಸಿ ಸಮಸ್ಯೆಗಳಿಗೆ ಪರಿಹಾರ ಸೂಚಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ನೀಡಿ ಕುಂದು ಕೊರತೆ ಸಭೆಗಳ ಉಪಯೋಗ ಪಡೆಯಬೇಕೆಂದರು.
Report acceptance meeting ಶಿವಮೊಗ್ಗ ತಹಶೀಲ್ದಾರ್ ಗಿರೀಶ್ ಮಾತನಾಡಿ, ಸರ್ಕಾರಿ ಅಧಿಕಾರಿ/ನೌಕರರು ತಮ್ಮ ತಮ್ಮ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ಅರ್ಥ ಮಾಡಿಕೊಂಡು ನಿಗದಿತ ಅವಧಿಯೊಳಗೆ ಕರ್ತವ್ಯ ನಿರ್ವಹಿಸಿದಲ್ಲಿ ಸಮಸ್ಯೆಗಳು ಅಷ್ಟಾಗಿ ಉದ್ಭವಿಸುವುದಿಲ್ಲ. ಯಾರಿಗೂ ಹೆದರಿ ಕೆಲಸ ಮಾಡುವ ಅವಶ್ಯಕತೆ ಇಲ್ಲ. ಯಾವುದೇ ಹಣ, ಆಮಿಷಗಳಿಗೆ ಒಳಗಾಗದೇ ನಮ್ಮ ಕೆಲಸವನ್ನು ನಿಯಮಾನುಸಾರ ಸಕಾಲದಲ್ಲಿ ನಿರ್ವಹಿಸಿದರೆ ಸಾಕು. ಸರ್ಕಾರಿ ಕೆಲಸ ಪುಣ್ಯದ ಕೆಲಸವಾಗಿದ್ದು, ಪ್ರಾಮಾಣಿಕವಾಗಿ ಮಾಡೋಣ ಎಂದರು.
ಸಭೆಯಲ್ಲಿ ಕಳೆದ ಮಾಹೆಯಲ್ಲಿ ಸ್ವೀಕರಿಸಲಾದ 7 ಅರ್ಜಿಗಳ ಪೈಕಿ 6 ನ್ನು ವಿಲೇವಾರಿ ಮಾಡಲಾಯಿತು. ಇಂದಿನ ಸಭೆಯಲ್ಲಿ ಮಹಾನಗರ ಪಾಲಿಕೆ, ಕಂದಾಯ ಇಲಾಖೆ, ನೀರಾವರಿ ಇಲಾಖೆಗಳಿಗೆ ಸಂಬಂಧಿಸಿದ 6 ಅಹವಾಲುಗಳನ್ನು ಸ್ವೀಕರಿಸಲಾಯಿತು.
ಸಭೆಯಲ್ಲಿ ಶಿವಮೊಗ್ಗ ತಾಲ್ಲೂಕು ಇಓ ಅವಿನಾಶ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...