Wednesday, October 2, 2024
Wednesday, October 2, 2024

B. Y. Vijayendra ಎಸ್ ಸಿ ಎಸ್ಟಿ ಕಲ್ಯಾಣ ಕಾರ್ಯಕ್ರಮಗಳು ಪ್ರಧಾನಿ ಮೋದಿ ಅವರ ಸರ್ಕಾರದಿಂದಲೇ ಹೆಚ್ಚು‌ ಜಾರಿಗೆ- ಬಿ.ವೈ.ವಿಜಯೇಂದ್ರ

Date:

B. Y. Vijayendra ಶಿಕಾರಿಪುರದಲ್ಲಿ ಆಯೋಜಿಸಿದ್ದ ಬಿಜೆಪಿ ಎಸ್‌ಸಿ-ಎಸ್‌ಟಿ ಕಾರ್ಯಕರ್ತರ ಬೃಹತ್‌ ಸಮಾವೇಶವನ್ನು ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಉದ್ಘಾಟಿಸಿದರು.

ಸ್ವಾತಂತ್ರ್ಯಾ ನಂತರ ಈ ದೇಶದಲ್ಲಿ ಎಸ್.ಸಿ- ಎಸ್.ಟಿ ಸಮುದಾಯಗಳಿಗೆ ಆರ್ಥಿಕವಾಗಿ, ಔದ್ಯೋಗಿಕವಾಗಿ, ರಾಜಕೀಯವಾಗಿ ಶಕ್ತಿ ಕೊಡುವ ಪ್ರಾಮಾಣಿಕ ಪ್ರಯತ್ನ ಏನಾದರೂ ನಡೆದಿದ್ದರೆ ಅದು ಪ್ರಧಾನಿ ಶ್ರೀ. ನರೇಂದ್ರ ಮೋದಿ
ಜೀ ಅವರ ಹಾಗೂ ರಾಜ್ಯದಲ್ಲಿ ಬಸವ ತತ್ವ ಅನುಸರಿಸಿ ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುವ ನಿಟ್ಟಿನಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಶ್ರಮಿಸಿದ ಸನ್ಮಾನ್ಯ ಶ್ರೀ ಬಿ ಎಸ್ ಯಡಯೂರಪ್ಪ
ಅವರ ಅಧಿಕಾರದ ಅವಧಿಯಲ್ಲಿ ಮಾತ್ರ ಎಂದು ಬಿಜೆಪಿ ರಾಜ್ಯ ಅಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹೇಳಿದರು.

ಸ್ವಾಭಿಮಾನಿ ಬದುಕು ಕಟ್ಟಿಕೊಡಬೇಕೆನ್ನುವ ನಿಟ್ಟಿನಲ್ಲಿ ‘ವಿಶ್ವಕರ್ಮ’ ಯೋಜನೆಯಂತಹ ಮಹತ್ವದ ಯೋಜನೆಯನ್ನು ಜಾರಿಗೆ ತರುವ ಮೂಲಕ “ನಮ್ಮದು ವರ್ಷದ ಕೂಳನ್ನು ಕೊಟ್ಟು ಬದುಕು ಕಟ್ಟಿಕೊಡುವ ಸರ್ಕಾರ” ಎಂದು ತೋರಿಸಿಕೊಟ್ಟವರು ನಮ್ಮ ನರೇಂದ್ರ ಮೋದಿಯವರು. ಆದ್ದರಿಂದ ಅವರನ್ನು ಮಗದೊಮ್ಮೆ ಪ್ರಧಾನಿ ಮಾಡುವ ದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕೆಂಬ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ
,
, ಜನಪ್ರಿಯ ಸಂಸದರಾದ ಬಿವೈ ರಾಘವೇಂದ್ರ
, ರಾಜ್ಯ ಉಪಾಧ್ಯಕ್ಷರಾದ ರಾಜು ಗೌಡ
, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಜೀವ್
,
, B. Y. Vijayendra ವಿಧಾನ ಪರಿಷತ್ ಉಪ ನಾಯಕರಾದ ಶ್ರೀ ಸುನಿಲ್ ವಲ್ಯಾಪುರೆ, ಶಾಸಕರಾದ ಶ್ರೀಮತಿ ಶಾರದಾ ಪೂರ್ಯಾ ನಾಯಕ್, ಮಾಜಿ ಶಾಸಕರಾದ ಶ್ರೀ ಅಶೋಕ್ ನಾಯಕ್, ರಾಜ್ಯ ಕಾರ್ಯದರ್ಶಿ ಶ್ರೀ ಶರಣು ತಳ್ಳೀಕೇರಿ, ಶ್ರೀ ತಮ್ಮೇಶ್ ಗೌಡ, ಸ್ಥಳೀಯ ಮುಖಂಡರಾದ ಶ್ರೀ ಗುರುಮೂರ್ತಿ, ಶ್ರೀ ಎಚ್.ಟಿ.ಬಳಿಗಾರ್, ಶ್ರೀ ರಾಮಾ ನಾಯಕ್, ಶ್ರೀ ಎಸ್ ಹನುಮಂತಪ್ಪ ,ತಾಲ್ಲೂಕು ಅಧ್ಯಕ್ಷರು, ಎಸ್ ಸಿ-ಎಸ್ ಟಿ ಮೋರ್ಚಾಗಳ ಅಧ್ಯಕ್ಷರು, ಶಕ್ತಿಕೇಂದ್ರ ಹಾಗೂ ಮಹಾ ಶಕ್ತಿಕೇಂದ್ರಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...