Veerashaiva Mahasabha ಜಾತಿಗಣತಿ ವರದಿಯನ್ನು ಸರ್ಕಾರ ಒಪ್ಪಬಾರದು, ಒಪ್ಪಿದರೆ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಎಚ್ಚರಿಕೆ ನೀಡಿದೆ.
ಈ ಕುರಿತು ಮಾತನಾಡಿರುವ ಮಹಾಸಭಾ ಕಾರ್ಯದರ್ಶಿ ಹೆಚ್.ಎಂ.ರೇಣುಕ ಪ್ರಸನ್ನ ಅವರ, ಮೊದಲಿಗೆ ಜಾತಿ ಗಣತಿ ಸಮೀಕ್ಷೆಯ ಉದ್ದೇಶದಿಂದಲೇ ಕಾಂತರಾಜು ಆಯೋಗ ರಚಿಸಲಾಗಿತ್ತು. ನಂತರ ಇದನ್ನು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿ ಬದಲಾಯಿಸಲಾಯಿತು.
ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಈಗ ನೀಡಿರುವ ವರದಿಯ ಬಗ್ಗೆ ಹಲವು ಅನುಮಾನಗಳಿವೆ. ಆದ್ದರಿಂದ ವರದಿಯನ್ನು ಅಂಗೀಕರಿಸಬಾರದು. ಒಂದು ವೇಳೆ ಅಂಗೀಕರಿಸಿದ್ದೇ ಆದರೆ, ಸ್ವಾಮೀಜಿಗಳ ಜೊತೆಗೂಡಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.
ವರದಿ ಸಿದ್ಧವಾಗಿ ಸುಮಾರು 8 ವರ್ಷಗಳಾಗಿವೆ ಈ ಅವಧಿಯಲ್ಲಿ ಜಾತಿವಾರು ಜನಸಂಖ್ಯೆಯಲ್ಲಿ ಸಾಕಷ್ಟು ಏರುಪೇರಾಗಿವೆ. ಈ ವರದಿ ಅಂಗೀಕರಿಸುವುದರಿಂದ ಎಲ್ಲಾ ಸಮುದಾಯಗಳಿಗೂ ಅನ್ಯಾಯವಾಗುತ್ತದೆ. ಹೀಗಾಗಿ ಮಹಾಸಭಾವು ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿದೆ. ದಾವಣಗೆರೆಯಲ್ಲಿ ನಡೆದ 24ನೇ ಮಹಾಧಿವೇಶನದಲ್ಲೂ ಈ ವರದಿಯನ್ನು ಅಂಗೀಕರಿಸದಂತೆ ನಿರ್ಣಯ ಕೈಗೊಳ್ಳಲಾಗಿತ್ತು ಎಂದು ತಿಳಿಸಿದರು.
Veerashaiva Mahasabha ವೀರಶೈವ-ಲಿಂಗಾಯ ಸಮುದಾಯ ಕರ್ನಾಟಕದ ಅತಿದೊಡ್ಡ ಸಮುದಾಯಗಳಲ್ಲಿ ಒಂದಾಗಿದೆ. ಸಮುದಾಯದವರಿಗೆ 8 ವಕ್ಷದ ಹಿಂದೆ ಮಾಹಿತಿ ಕೊರತೆ ಇತ್ತು. ದತ್ತಾಂಶ ಸಂಗ್ರಹಿಸುವ ವೇಳೆ ನಿಗದಿಪಡಿಸಿದ ಸಂಕೇತ ನಮೂದಿಸದೇ ಇರುವುದರಿಂದ ಇದೀ ಸಮುದಾಯ ಜನಸಂಖ್ಯೆಯೇ ಕ್ಷೀಣಿಸಿದೆ. ಗಣತಿಗೆ ನಿಯುಕ್ತರಾದ ಸಿಬ್ಬಂದಿ ಹವು ಮನೆಗಳಿಗೆ ಖುದ್ದು ಭೇಟಿ ನೀಡದೇ ಸರಿಯಾದ ಮಾಹಿತಿಯನ್ನು ದಾಖಲಿಸಿಲ್ಲ. ಈ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಇನ್ನು ತರಾತುರಿಯಲ್ಲಿ ಅಂಗೀಕರಿಸಿದರೆ ಉಪಯೋಗಕ್ಕಿಂತ ಹಾನಿಯೇ ಹೆಚ್ಚಾಗುತ್ತದೆ. ಆದ್ದರಿಂದ ಸರ್ಕಾರ ವರದಿಯನ್ನು ತಿರಸ್ಕರಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.