Thursday, March 19, 2026
Thursday, March 19, 2026

Purushothamana Prasanga Movie  ಪುರುಷೋತ್ತಮನ ಪ್ರಸಂಗ, ಸಿನಿಮಾ ಇಂದು ಬೆಳ್ಳಿತೆರೆಗೆ

Date:

Purushothamana Prasanga Movie  ಇಂದು ರಾಜ್ಯಾದ್ಯಂತ ಪುರುಷೋತ್ತಮನ ಪ್ರಸಂಗ ಸಿನಿಮಾ ಬಿಡುಗಡೆಗೊಂಡಿದೆ.

ಪುರುಷೋತ್ತಮನ ಪ್ರಸಂಗ ಸಿನಿಮಾವನ್ನು ದೇವದಾಸ್ ಕಾಪಿಕಾಡ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಅಜಯ್ ಪೃಥ್ವಿ ನಾಯಕನಾಗಿ, ರಿಷಿಕಾ ನಾಯ್ಕ್ ಮತ್ತು ದೀಪಿಕಾ ಪುರುಷೋತ್ತಮ ನಾಯಕಿಯರಾಗಿ ಅಭಿನಯಿಸಿದ್ದಾರೆ.

ಉಳಿದಂತೆ ನವೀನ್ ಡಿ ಪಡೀಲ್ , ಅರವಿಂದ್ ಬೋಳಾರ್, ದೀಪಕ್ ರೈ ಪಣಾಜೆ, ಸಾಹಿಕೃಷ್ಣ ಕುಡ್ಲ, ದೇವದಾಸ್ ಕಾಪಿಕಾಡ್ ತಾರಾಗಣದಲ್ಲಿದ್ದಾರೆ.

ನಕುಲ್ ಅಭಯಂಕರ್ ಸಂಗೀತ, ವಿಷ್ಣು ಪ್ರಸಾದ್ ಪಿ ಛಾಯಾಗ್ರಹಣ ಸಿನಿಮಾಗಿದೆ. ಈ ಚಿತ್ರವನ್ನು ರಾಷ್ಟ್ರಕೂಟ ಪಿಕ್ಚರ್ಸ್‌ ಲಾಂಛನದಲ್ಲಿ ವಿ.ರವಿಕುಮಾರ್‌ ನಿರ್ಮಿಸಿದ್ದಾರೆ.

Purushothamana Prasanga Movie  ಒಂದೇ ಹಂತದಲ್ಲಿ ಸತತ 29 ದಿನಗಳ ಕಾಲ ಪುರುಷೋತ್ತಮನ ಪ್ರಸಂಗ ಸಿನಿಮಾದ ಚಿತ್ರೀಕರಣ ನಡೆದಿತ್ತು. ಮಂಗಳೂರು ಸುತ್ತಮುತ್ತಲಿನ ಬಜಪೆ, ಮುರನಗರ, ಕೆಂಜಾರ್ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಅಲ್ಲದೇ ದುಬೈನಲ್ಲಿ 7 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು. ಉತ್ತಮ ಹಾಸ್ಯ ಕಥಾಹಂದರವನ್ನು ಒಳಗೊಂಡಿರುವ ಸಿನಿಮಾದಲ್ಲಿ ಪ್ರತಿಯೊಂದು ಪಾತ್ರವೂ ಇಲ್ಲಿ ಕತೆಗೆ ಪೂರಕವಾಗಿ ಪ್ರಾಮುಖ್ಯತೆಯನ್ನು ಪಡೆದಿದೆ. ಈ ಸಿನಿಮಾದ ಮೂಲಕ ಅಜಯ್ ಎಂಬ ನವ ನಟನನ್ನು ಹಾಗೂ ರಿಷಿಕಾ ನಾಯ್ಕ ಮತ್ತು ದೀಪಿಕಾ ಎಂಬುವರನ್ನು ನಟಿಯಾಗಿ ಕನ್ನಡಕ್ಕೆ ಪರಿಚಯಿಸಲಾಗಿದೆ. ಹಾಸ್ಯ ದಿಗ್ಗಜರನ್ನೊಳಗೊಂಡ ತಾರಾಗಣದಲ್ಲಿ ಬಹಳಷ್ಟು ಮಂದಿ ಹೊಸಬರಿಗೂ ಅವಕಾಶ ನೀಡಲಾಗಿದೆ ಎಂದು ನಿರ್ದೇಶಕ ದೇವದಾಸ್ ಕಾಫಿ ಕಾಡ್ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...