Sunday, September 27, 2026
Sunday, September 27, 2026

T D Megharaj ಬರಗಾಲ ಪರಿಹಾರದ ಬಗ್ಗೆ ಯಾವೊಬ್ಬ ಸಚಿವರೂ ಗಮನ ಹರಿಸುತ್ತಿಲ್ಲ- ಟಿ.ಡಿ.ಮೇಘರಾಜ್

Date:

T D Megharaj  ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಕುಡಿಯುವ ನೀರಿಗೂ ಸಹ ಹಾಹಾಕಾರ ಎದ್ದಿದೆ. ತೋಟದ ಬೆಳೆಗಳಿಗೆ ನೀರು ಕೊರತೆಯಿಂದಾಗಿ ತೋಟಗಳು ನಾಶವಾಗುತ್ತಿವೆ ಆದರೂ ಕೂಡ ಯಾವೊಬ್ಬ ಸಚಿವರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಆರೋಪಿಸಿದರು.

ಶಿವಮೊಗ್ಗ ಬಿಜೆಪಿ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿಯವರೆಗೂ ರಾಜ್ಯದಲ್ಲಿ 875ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ನೀರಿನ ಕೊರತೆ ಇದ್ದರೂ ಸಹ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ. ಶುದ್ಧ ನೀರಿನ ಘಟಕಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ರೈತ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ದೂರಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಕಳೆದ ಸಾಲಿನಲ್ಲಿ 11500 ಕೋಟಿ ರೂ. ಹಾಗೂ ಪ್ರಸಕ್ತ ಸಾಲಿನ 14 ಸಾವಿರ ಕೋಟಿ ರೂ. ಈ ಸಮುದಾಯಗಳಿಗೆ ಇದುವರೆಗೂ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಇದರಿಂದಾಗಿ ಪರಿಶಿಷ್ಟ ಜಾತಿ, ಪಂಗಡಗಳ ವಿರೋಧಿ ಧೋರಣೆಯನ್ನು ಸರ್ಕಾರ ಅನುಸರಿಸುತ್ತಿದೆ ಎಂದ ಅವರು, ಸರ್ಕಾರ ತುಷ್ಠೀಕರಣದ ರಾಜಕಾರಣ ಮಾಡುತ್ತಿದೆ. ಇದು ಹಿಂದೂ ವಿರೋಧಿ ಸರ್ಕಾರವಾಗಿದೆ ಎಂದರು.

ರಾಜ್ಯ ಸರ್ಕಾರ ತನ್ನ ಪೈಫಲ್ಯಗಳನ್ನು ಮರೆ ಮಾಚಲು ಕೇಂದ್ರ ಸರ್ಕಾರದ ಮೇಲೆ ಬೊಟ್ಟು ತೋರಿಸುತ್ತಿದೆ ಎಂದ ಅವರು ಕಾಂಗ್ರೆಸ್ ಸರ್ಕಾರ ದಮನಕಾರಿ ನೀತಿ ಅನುಸರಿಸುತ್ತಿದೆ. ಪಕ್ಷದ ಹೈಕಮಾಂಡ್ ಓಲೈಸುವ ದೃಷ್ಟಿಯಿಂದ ಕಾಟಾಚಾರದ ಆಡಳಿತ ನಡೆಯುತ್ತಿದೆ ಎಂದು ದೂರಿದರು.

T D Megharaj  ಸುದ್ದಿಗೋಷ್ಠಿಯಲ್ಲಿ ಪಕ್ಷದ ಪ್ರಮುಖ ರಾದ ಮಾಲತೇಶ್, ಚಂದ್ರಶೇಖರ್, ವಿನ್ಸೆಂಟ್ ರೋಡ್ರಿಗಸ್, ಹೃಷಿಕೇಶ್ ಪೈ, ಕೆ.ವಿ. ಅಣ್ಣಪ್ಪ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...