Sri Adichunchanagiri Mutt ಮಗು ಮೊದಲು ತನ್ನಲ್ಲಿ ತಾನು ಆತ್ಮವಿಶ್ವಾಸ ಮೂಡಿಸಿಕೊಳ್ಳುವುದು ಅತ್ಯವಶ್ಯಕ. ತನ್ನ ಕಲಿಕೆಯೇ ತನ್ನ ಏಳಿಗೆ ಎಂಬ ಅರಿವು ಮೂಡಿದರೆ ಕಲಿಕೆಯ ಶ್ರಮ ಸಾರ್ಥಕವಾಗುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.
ಅವರು ತಮ್ಮ ವಿದ್ಯಾಸಂಸ್ಥೆಯ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಶಾರದಾ ಪೂಜೆಯಲ್ಲಿ ಮಾತನಾಡಿದರು.
ಮೊಬೈಲ್ ಬಳಕೆ ಅತಿಯಾದರೆ ಅದು ನಮ್ಮ ಜೀವನವನ್ನೇ ಹಾಳು ಮಾಡುತ್ತದೆ. ಅದನ್ನು ಹಿತಮಿತವಾಗಿ ಬಳಸಿದರೆ ನಮ್ಮ ಜೀವನಕ್ಕೆ ಸಹಾಯ ಮಾಡುತ್ತದೆ. ಆದರೆ ವಿದ್ಯಾರ್ಥಿಗಳಾದ ನಿಮಗೆ ಅದರಲ್ಲಿ ಕೆಟ್ಟದ್ದನ್ನು ಬಳಸಿಕೊಳ್ಳುವ ಮನಸ್ಥಿತಿಯೇ ಹೆಚ್ಚಾಗಿರುತ್ತದೆ. ಆದ್ದರಿಂದ ಪರೀಕ್ಷೆ ಮುಗಿಯುವ ತನಕ ಮೊಬೈಲನ್ನು ಮುಟ್ಟದೇ ಪುಸ್ತಕದ ಮೊರೆ ಹೋಗಿ ಅದು ನಿಮ್ಮ ಭವಿಷ್ಯವನ್ನು ರೂಪಿಸುತ್ತದೆ ಎಂದ ಅವರು, ಪರೀಕ್ಷೆಗೆ ಕೆಲವೇ ದಿನಗಳು ಇರುವ ಈ ಸಂದರ್ಭದಲ್ಲಿ ಪ್ರತಿ ನಿಮಿಷವನ್ನೂ ಕೂಡ ವ್ಯಯಮಾಡದೇ ಸದುಪಯೋಗಪಡಿಸಿಕೊಂಡು ಅಭ್ಯಾಸ ಮಾಡಿದ್ದೇ ಆದರೆ ಪರೀಕ್ಷೆಯಲ್ಲಿ ನಿಮ್ಮ ನಿರೀಕ್ಷೆಯ ಗೋಲನ್ನು ಮುಟ್ಟಲು ಸಾಧ್ಯವಾಗುತ್ತದೆ ಎಂದರು.
Sri Adichunchanagiri Mutt ತಾನು ಓದಲು ಕೂರುವ ಸ್ಥಳದಲ್ಲಿ ವೇಳಾ ಪಟ್ಟಿ, ದಿನಚರಿಯ ಪಟ್ಟಿಯನ್ನು ಸದಾ ಕಣ್ಣಿಗೆ ಕಾಣುವಂತೆ ಇರಿಸಿಕೊಳ್ಳಬೇಕು. ತರಗತಿಯಲ್ಲಿ ತನಗಿಂತ ಹೆಚ್ಚು ಅಂಕ ಪಡೆದ ಸಹಪಾಠಿಯನ್ನು ಕಂಡು ಅಸೂಯೆ ಪಡದೆ ಅವನ ಓದಿನ ವಿಧಾನವನ್ನು ಅರಿತು ತಾನೂ ಅದನ್ನು ಕ್ರಮೇಣ ಅಳವಡಿಸಿಕೊಳ್ಳಬಹುದು ಎಂದರು.