Sunday, September 27, 2026
Sunday, September 27, 2026

Bharat Jodo Nyaya Yatra:  ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ,ರಾಜಾಸ್ತಾನದ ಧೊಲ್ಪುರ್ ನಿಂದ ಪುನರಾರಂಭ

Date:

Bharat Jodo Nyaya Yatra:  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುನ್ನಡೆಸುತ್ತಿರುವ ‘ಭಾರತ್ ಜೋಡೋ ನ್ಯಾಯ ಯಾತ್ರೆ (ಮಾ.2) ಮಧ್ಯಾಹ್ನ ರಾಜಸ್ಥಾನದ ಧೋಲ್ಪುರ್ ಜಿಲ್ಲೆಯಿಂದ ಪುನರಾರಂಭಗೊಂಡಿದೆ.

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುಖಜಿಂದರ್ ರಾಂಧವಾ ಮತ್ತು ಇತರ ನಾಯಕರು ಹಾಗೂ ಭಾರೀ ಸಂಖ್ಯೆಯ ಕಾರ್ಯಕರ್ತರ ಸಮ್ಮುಖದಲ್ಲಿ ರಾಹುಲ್ ಯಾತ್ರೆಯನ್ನು ಪುನರಾರಂಭಿಸಿದ್ದಾರೆ.

ತೆರದ ವಾಹನದಲ್ಲಿ ಪಕ್ಷದ ಧ್ವಜ ಬೀಸಿ ರಾಹುಲ್ ಗಾಂಧಿ ಯಾತ್ರೆಗೆ ಚಾಲನೆ ಕೊಟ್ಟರು. ಸಾವಿರಾರು ಮಂದಿ ಕಾರ್ಯಕರ್ತರು ಅವರಿಗೆ ಸಾಥ್ ನೀಡಿದರು.

ಐದು ದಿನಗಳ ವಿರಾಮದ ನಂತರ ಇಂದು ಮಧ್ಯಾಹ್ನ ರಾಜಸ್ಥಾನದ ದೋಲ್ಪುರ ಜಿಲ್ಲೆಯಲ್ಲಿ ಪುನರಾರಂಭಗೊಂಡ ಯಾತ್ರೆಯು, ಸಂಜೆಯ ಹೊತ್ತಿಗೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಗೆ ಪ್ರವೇಶಿಸಿದೆ. ಇಂದು ರಾತ್ರಿ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ರಾಹುಲ್ ಗಾಂಧಿ ವಾಸ್ತವ್ಯ ಹೂಡಲಿದ್ದಾರೆ.

Bharat Jodo Nyaya Yatra:  ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಎರಡು ವಿಶೇಷ ಉಪನ್ಯಾಸಗಳನ್ನು ನೀಡಲು ಮತ್ತು ನವದೆಹಲಿಯಲ್ಲಿ ಪ್ರಮುಖ ಸಭೆಗಳಲ್ಲಿ ಭಾಗವಹಿಸಲು ರಾಹುಲ್ ಗಾಂಧಿ ತೆರಳಿದ್ದ ಕಾರಣ ಭಾರತ್ ಜೋಡೋ ನ್ಯಾಯ ಯಾತ್ರೆಯು ಫೆಬ್ರವರಿ 26 ರಿಂದ ಮಾರ್ಚ್ 1 ರವರೆಗೆ ಸ್ಥಗಿತಗೊಂಡಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...