Monday, February 2, 2026
Monday, February 2, 2026

Death News ಮಡಿಕೇರಿಯ ಸನಿಹದ ನಿಶಾನಿ ಬೆಟ್ಟದಲ್ಲಿ ಮನೆಗೆ ವಾಪಸಾಗುತ್ತಿದ್ದ ವ್ಯಕ್ತಿಯನ್ನ ತುಳಿದ ಕಾಡಾನೆ

Date:

Death News ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವ್ಯಕ್ತಿಯೊಬ್ಬರು ಕಾಡಾನೆ ತುಳಿದು ಮೃತಪಟ್ಟಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

ಮಡಿಕೇರಿ ನಗರದಿಂದ ಸ್ವಲ್ಪವೇ ದೂರವಿರುವ ನಿಶಾನಿ ಬೆಟ್ಟದ ಸಮೀಪದಲ್ಲಿ ಘಟನೆ ನಡೆದಿದೆ. ಮೃತರನ್ನು ಗಾಳಿಬೀಡು ಗ್ರಾಮದ ವರಡ ನಿವಾಸಿ ಅಪ್ಪಚ್ಚ( 60) ಎಂದು ಗುರುತಿಸಲಾಗಿದೆ. ಕೊಡಗಿನಲ್ಲಿ ಕಾಡಾನೆ ಹಾವಳಿಯಿಂದ ಜನ ಜೀವ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಆಗಾಗ ವರದಿಯಾಗುತ್ತಲೇ ಇವೆ. ಈಗ ಮತ್ತೆ ಪ್ರಕರಣ ಮರುಕಳಿಸಿದೆ.

ಕೆಲಸಕ್ಕೆಂದು ಹೋಗಿದ್ದ ಅಪ್ಪಚ್ಚ ಮನೆಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಕುಟುಂಬದವರು ಹುಡುಕಾಟ ನಡೆಸಿದ್ದರು. ಆದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರೂ ಕೂಡ ಪತ್ತೆಗೆ ಕ್ರಮ ವಹಿಸಿದ್ದರು.

ಈ ನಡುವೆ ಗಾಳಿ ಬೀಡು ಸಮೀಪದ ನಿಶಾನಿ ಬೆಟ್ಟದ ಬಳಿ ವ್ಯಕ್ತಿಯೊಬ್ಬ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದನ್ನು ಟ್ರಕ್ಕಿಂಗ್‌ಗೆ ತೆರಳಿದವರು ಗಮನಿಸಿದ್ದರು. ಇದನ್ನು ಅವರು ಸ್ಥಳೀಯರ ಗಮನಕ್ಕೆ ತಂದಿದ್ದರು. ಆನಂತರ ಪೊಲೀಸರಿಗೆ ಮಾಹಿತಿ ತಿಳಿದು ಬಂದು ತಪಾಸಣೆ ನಡೆಸಿದಾಗ ಆನೆ ದಾಳಿಯಿಂದ ವ್ಯಕ್ತಿ ಮೃತಪಟ್ಟಿರುವುದು ಕಂಡು ಬಂದಿತ್ತು. ಅಪ್ಪಚ್ಚ ಅವರ ಕುಟುಂಬದವರೂ ಗುರುತಿಸಿದ್ದರು. ಆನಂತರ ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿತ್ತು.

Death News ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೆ ದಾಳಿ ಮಾಡಿರುವ ಕುರಿತಾಗಿಯೂ ವಿವರಗಳನ್ನು ಸಂಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...