Thursday, March 19, 2026
Thursday, March 19, 2026

Supreme Court “ನೀವು ಸಾಮಾನ್ಯ ಮನುಷ್ಯರಲ್ಲ ಸಚಿವರ ಹೇಳಿಕೆ ನೀಡುವಾಗ ಪರಿಣಾಮದ ಬಗ್ಗೆ ಯೋಚಿಸಿ”- ಸಚಿವ ಉದಯನಿಧಿಗೆ ಸುಪ್ರೀಂ ಚಾಟಿ

Date:

Supreme Court ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸುಪ್ರೀಂ ಕೋರ್ಟ್ ಸೋಮವಾರ ಛೀಮಾರಿ ಹಾಕಿದೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ದುರುಪಯೋಗಪಡಿಸಿಕೊಂಡ ನಂತರ ಸುಪ್ರೀಂ ಕೋರ್ಟ್‌ಗೆ ಏಕೆ ಅರ್ಜಿ ಸಲ್ಲಿಸಿದ್ದೀರಿ ಎಂದು ಸ್ಟಾಲಿನ್ ಅವರನ್ನು ಪ್ರಶ್ನೆ ಮಾಡಿದೆ.


Supreme Court ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಸ್ಟಾಲಿನ್‌ಗೆ ಅವರು ಸಚಿವರಾಗಿದ್ದು, ಅವರ ಹೇಳಿಕೆಯ ಪರಿಣಾಮಗಳನ್ನು ತಿಳಿದುಕೊಳ್ಳಬೇಕು ಎಂದು ತೀಕ್ಷ್ಮವಾಗಿ ತಿಳಿಸಿದ್ದಾರೆ.
“ನೀವು ಸಂವಿಧಾನದ ಅನುಚ್ಛೇದ 19(1)(ಎ) ಅಡಿಯಲ್ಲಿ ಮತ್ತು ಆರ್ಟಿಕಲ್ 25 ರ ಅಡಿಯಲ್ಲಿ ನಿಮ್ಮ ಹಕ್ಕನ್ನು ದುರುಪಯೋಗಪಡಿಸಿಕೊಳ್ಳುತ್ತೀರಿ. ಈಗ ನೀವು ಆರ್ಟಿಕಲ್ 32 ರ ಅಡಿಯಲ್ಲಿ (ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು) ನಿಮ್ಮ ಹಕ್ಕನ್ನು ಚಲಾಯಿಸುತ್ತಿದ್ದೀರಾ? ನೀವು ಹೇಳಿದ್ದರ ಪರಿಣಾಮ ಎಷ್ಟರ ಮಟ್ಟಿಗಿದೆ ಎಂದು ಯೋಚಿಸಿದ್ದೀರಾ, ನೀವು ಸಾಮಾನ್ಯ ವ್ಯಕ್ತಿಯಲ್ಲ, ನೀವು ರಾಜ್ಯದ ಮಂತ್ರಿಯಾಗಿದ್ದೀರಿ, ಅದರ ಪರಿಣಾಮಗಳನ್ನು ನೀವೇ ತಿಳಿದುಕೊಳ್ಳಬೇಕು ಎಂದು ಛೀಮಾರಿ ಹಾಕಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಮಾರ್ಚ್ 15ಕ್ಕೆ ಮುಂದೂಡಿದೆ.
ಉದಯನಿಧಿ ಸ್ಟಾಲಿನ್ ತಮಿಳುನಾಡು ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್ ಅವರ ಪುತ್ರ.
ಸೆಪ್ಟೆಂಬರ್ 2023 ರಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದ್ದು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಅದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...