Pak Jindabad Slogan Case Arrest: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ವಿಧಾನಸೌಧ ಠಾಣೆಯ ಪೊಲೀಸರು ಮೂವರನ್ನು ಬಂಧಿಸಿರುವುದಾಗಿ ವರದಿಯಾಗಿದೆ.
ಬಂಧಿತರನ್ನು ಮುನವ್ವರ್, ಇಲ್ತಾಜ್ ಮತ್ತು ಶಫಿ ನಾಶಿಪುಡಿ ಎಂದು ಗುರುತಿಸಲಾಗಿದೆ. ಆರ್.ಟಿ.ನಗರದ ಮುನಾವರ್, ದೆಹಲಿ ಮೂಲದ ಇಲ್ತಾಜ್, ಹಾವೇರಿ ಜಿಲ್ಲೆಯ ಬ್ಯಾಡಗಿ ನಿವಾಸಿ ಶಫಿ ನಾಶಿಪುಡಿ ಬಂಧಿತರು ಎಂದು ತಿಳಿದು ಬಂದಿದೆ. ಸದ್ಯ ಮೂವರು ಆರೋಪಿಗಳನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂದು ಬಿಜೆಪಿ ಸದನದ ಹೊರಗೆ ಮತ್ತು ಒಳಗೆ ಗದ್ದಲವನ್ನು ಸೃಷ್ಟಿಸಿತ್ತು. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದಾದ ಬಳಿಕ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರಕಾರ ಘಟನೆ ನಡೆದ ದೃಶ್ಯಗಳನ್ನು ಎಫ್‌ಎಸ್‌ಎಲ್‌ಗೆ ರವಾನಿಸಿದೆ. ಈ ಕುರಿತ ವರದಿ ಬಹಿರಂಗವಾಗುವ ಮೊದಲೇ ಮೂವರ ಬಂಧನ ನಡೆದಿದೆ.
ಈ ಕುರಿತು ಬೆಂಗಳೂರು ಪೊಲೀಸ್ ಉಪ ಆಯುಕ್ತರು ಪ್ರಕಟಣೆಯನ್ನು ಹೊರಡಿಸಿದ್ದು, ಎಫ್‌ಎಸ್ಎಲ್ ವರದಿ, ಸಾಂಧರ್ಬಿಕ Pak Jindabad Slogan Case Arrest: ಸಾಕ್ಷ್ಯಾಧಾರಗಳು, ಸಾಕ್ಷಿಗಳ ಹೇಳಿಕೆ ಮತ್ತು ಲಭ್ಯ ಸಾಕ್ಷಾಧಾರಗಳ ಮೇರೆಗೆ ಮೂರು ಜನ ಆರೋಪಿಗಳನ್ನು ಬಂಧಿಸಿ, ಅವರುಗಳ ವಿರುದ್ದ ಕಾನೂನು ಕ್ರಮ ಜರುಗಿಸಲಾಗಿರುತ್ತದೆ ಎಂದು ಬೆಂಗಳೂರು ನಗರದ ಕೇಂದ್ರ ವಿಭಾಗದ ಡಿಸಿಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Pak Jindabad Slogan Case Arrest: ಪಾಕಿಸ್ತಾನ್ ಪರ ಘೋಷಣೆ ಪ್ರಕರಣ, ಮೂವರ ಅರೆಸ್ಟ್
Date: