Wednesday, December 17, 2025
Wednesday, December 17, 2025

R M Manjunatha Gowda ಮಲೆನಾಡಿನ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಕೆಲಸ ಮಾಡಬೇಕಿದೆ. ಎಲ್ಲರ ಸಹಕಾರ ಬೇಕು- ಆರ್.ಎಂ.ಮಂಜುನಾಥ ಗೌಡ

Date:

R M Manjunatha Gowda ಮಲೆನಾಡು ಅಭಿವೃದ್ಧಿ ಮಂಡಳಿಯು 13 ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದೆ. 65 ಕ್ಕೂ ಹೆಚ್ಚು ಶಾಸಕರು, ಸಂಸದರು, ಅಧಿಕಾರಿಗಳನ್ನೊಂಡಿದ್ದು ಎಲ್ಲರ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯವನ್ನು ಮಾಡುತ್ತೇನೆ ಎಂದು ನೂತನ ಎಂಎಡಿಬಿ ಅಧ್ಯಕ್ಷರಾದ ಡಾ.ಆರ್ ಎಂ ಮಂಜುನಾಥ ಗೌಡ ತಿಳಿಸಿದರು.

ಶಿವಮೊಗ್ಗ ನಗರದ ಮಲೆನಾಡು ಅಭಿವೃದ್ಧಿ ಮಂಡಳಿಯ ಕಚೇರಿಯ ಆವರಣದಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡು ಮಾತನಾಡಿದ ಅವರು ಮೊದಲು ಬಂಗಾರಪ್ಪನವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಮುನ್ನುಡಿ ಬರೆದಿದ್ದರು. ನಂತರ ಅದು ಬೆಳೆದುಕೊಂಡು ಬಂದಿದೆ ಸರ್ಕಾರದಿಂದ ಆಗದೇ ಇರುವ ಕೆಲಸಗಳನ್ನು ಈ ಮಂಡಳಿಯಿಂದ ಮಾಡಬಹುದಾಗಿದೆ ಎಂದರು.

ಅಧ್ಯಕ್ಷರ ಅಧಿಕಾರ ಹೆಸರಿಗೆ ಮಾತ್ರವಲ್ಲ ಇದನ್ನು ನಿಭಾಯಿಸುವುದು ಸುಲಭದ ಕೆಲಸವಲ್ಲ ಹತ್ತಾರು ಎಂಎಲ್‍ಎ ಗಳು, ಸಂಸದರು ಎಲ್ಲಾರಿಗೂ ಅನುದಾನ ನೀಡಿ ಅಭಿವೃದ್ಧಿ ಮಾಡಬೇಕಾಗಿದೆ. ಆದರೆ ಪ್ರಸ್ತುತ ಬರಗಾಲದ ಸಂದರ್ಭದಲ್ಲಿ ಜನ ಮೂಲಭೂತ ಸೌಲಭ್ಯಗಳ ಕುರಿತು ಹೆಚ್ಚಿನ ಗಮನ ನೀಡಬೇಕಾಗಿದೆ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಅವರ ಸಹಕಾರದಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನವನ್ನು ತಂದು ಮಲೆನಾಡಿನ ಸಮಸ್ಯೆಗಳ ಕುರಿತು ಪರಿಶೀಲಿಸಿ ಕೆಲಸವನ್ನು ಮಾಡಬೇಕಾಗಿದೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

R M Manjunatha Gowda ಸರ್ಕಾರದಲ್ಲಿ ಆಗದೇ ಇರುವ ಕೆಲಸಗಳು ಮಲೆನಾಡು ಅಭಿವೃದ್ಧಿ ಮಂಡಳಿಯಿಂದ ಮಾಡಲು ಅವಕಾಶ ಇದೆ. ಮಲೆನಾಡಿನ ಅನೇಕ ಸಮಸ್ಯೆಗಳು ಮತ್ತು ತುರ್ತು ಸಂದರ್ಭದ ಕೆಲಸಗಳನ್ನು ಮಾಡಬಹುದು ಮುಂದಿನ ದಿನಗಳಲ್ಲಿ ಮಲೆನಾಡು ಪ್ರದೇಶದ ಪ್ರತಿ ಭಾಗದಲ್ಲಿಯೂ ಉತ್ತಮವಾದ ಕೆಲಸಗಳನ್ನು ಮಾಡಲಿದ್ದೇವೆ. ಸರ್ಕಾರ ಇನ್ನೂ ನಾಲ್ಕು ವರ್ಷಗಳ ಕಾಲವೂ ಉತ್ತಮ ಆಡಳಿತ ನೀಡಲಿದೆ. ಆರ್ಥಿಕ ಸಂಕಷ್ಟ ಬರಗಾಲದಲ್ಲೂ ಗ್ಯಾರಂಟಿ ಯೋಜನೆಗಳು ಜನರಿಗೆ ನೀಡಲಾಗಿದೆ. ಅದೇ ರೀತಿ ಎಲ್ಲಾ ನಿಗಮಗಳಿಗೂ ಹಣ ನೀಡಿ ಅಭಿವೃದ್ಧಿ ಕಡೆ ಹೆಚ್ಚು ಗಮನವನ್ನು ನೀಡಲಿದ್ದು ವಿಶೇಷವಾಗಿ ಮಲೆನಾಡಿನ ಅಭಿವೃದ್ಧಿಯ ಕಾರ್ಯ ನಡೆಲಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲ ಕೃಷ್ಣ, ಚನ್ನಗಿರಿಯ ಶಾಸಕ ಬಸವರಾಜ್ ಶಿವಗಂಗಾ, ಸೂಡ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್, ಮಾಜಿ ಸಂಸದರಾದ ಆಯನೂರು ಮಂಜುನಾಥ, ಮುಖಂಡರಾದ ಎಂ ಶ್ರೀಕಾಂತ್,ಮರಿಯಪ್ಪ, ಬಲ್ಕಿಶ್ ಬಾನು, ಗೋಣಿ ಮಾಲತೇಶ್, ಗೀತಾ ರಮೇಶ್, ಮೈಲಾರಪ್ಪ ಮತ್ತು ಅಧಿಕಾರಿ ವರ್ಗದವರು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...