DK Shivakumar ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾ ಮಾಡಿದೆ.
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದಿಂದ ಈ ತೀರ್ಪು ಹೊರಬಿದ್ದಿದೆ. ಡಿಕೆ ಶಿವಕುಮಾರ್ ಅವರ ಮೇಲಿದ್ದ ಇಡಿ 120 B ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿ ತೀರ್ಪು ನೀಡಲಾಗಿದೆ.
ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದಿಂದ ಈ ತೀರ್ಪು ಹೊರಬಿದ್ದಿದೆ. ಡಿಕೆ ಶಿವಕುಮಾರ್ ಅವರ ಮೇಲಿದ್ದ ಇಡಿ 120 B ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿ ತೀರ್ಪು ನೀಡಲಾಗಿದೆ.
ಬೆಂಗಳೂರು ಸೇರಿದಂತೆ ಇತರೆಡೆ ಡಿ. ಕೆ. ಶಿವಕುಮಾರ್ ಅವರಿಗೆ ಸೇರಿದ ಮನೆಗಳ ಮೇಲೆ 2017ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ದಾಳಿ ನಡೆಸಲಾಗಿತ್ತು. ಈ ವೇಳೆ ಅವರ ನಿಕಟವರ್ತಿಗಳ ಮನೆಯಲ್ಲಿ ದೊರೆತಿದ್ದ ಹಣವನ್ನು, ಶಿವಕುಮಾರ್ ಬೇನಾಮಿಯಾಗಿ ಇರಿಸಿದ್ದಾರೆ ಎಂದು ಆರೋಪಿಸಿ ಸಿಬಿಐ 2020ರ ಅ. 3ರಂದು ಎಫ್ಐಆರ್ ದಾಖಲಿಸಿತ್ತು.
DK Shivakumar 120 ‘ಬಿ’ ಅಡಿಯಲ್ಲಿ ಇಡಿ ದಾಖಲಿಸಿರುವ ಈ ಕ್ರಿಮಿನಲ್ ಪ್ರಕರಣದಿಂದ ತಮ್ಮನ್ನು ದೋಷಮುಕ್ತಗೊಳಿಸಬೇಕು ಎಂದು ಕೋರಿ ಡಿ. ಕೆ. ಶಿವಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಲ್ಲಿ ಜಯ ಸಿಗದ ಹಿನ್ನೆಲೆ ಡಿಕೆಶಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.