Thursday, March 19, 2026
Thursday, March 19, 2026

Siddaramaiah ”ನನ್ನ ಶಾಲೆ ,ನನ್ನ ಜವಾಬ್ದಾರಿ” ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಮುಖ್ಯಮಂತ್ರಿಗಳ ಸಂವಾದ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ನಮ್ಮ ಶಾಲೆ ನಮ್ಮ ಜವಾಬ್ದಾರಿ – ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿ, ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು.

ಮಕ್ಕಳು ಸಂವಿಧಾನವನ್ನು ಕೇವಲ ಕಂಠಪಾಠ ಮಾಡಿದರೆ ಸಾಲದು, ಅದರ ತಿರುಳನ್ನು ಅರಿತು ಅದರಂತೆ ನಡೆಯಬೇಕು.
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ತಿರುಳು. ಅಸಮಾನತೆ ಇಲ್ಲದ ಸಮಸಮಾಜ ನಿರ್ಮಾಣವಾಗಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರು ಇದನ್ನೇ ಹೇಳಿಕೊಂಡು ಬಂದಿದ್ದಾರಾದರೂ ಅಸಮಾನತೆ ಪೂರ್ಣವಾಗಿ ಹೋಗಿಲ್ಲ. ಇದೆಲ್ಲ ಓದಿ ಅರ್ಥ ಮಾಡಿಕೊಂಡು ಮಕ್ಕಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು.

ಸರ್ಕಾರಿ ಶಾಲೆಗಳಲ್ಲಿ ಕೆಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಯ ಅಭಿವೃದ್ಧಿಗೆ ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ. ಸಂವಿಧಾನ ಜಾರಿಗೆ ಬಂದ ನಂತರ ಉಚಿತ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಲಾಗಿದೆ. ಹಾಗಾಗಿ ಎಲ್ಲರಿಗೂ ಶಿಕ್ಷಣ ಕಡ್ಡಾಯವಾಗಿದೆ.

Siddaramaiah ನಾನು ಓದುವಾಗ ಸಂವಿಧಾನ ಜಾರಿಗೆ ಬಂದಿತ್ತು. ನಾನು ಹುಟ್ಟಿದ್ದು ಸ್ವಾತಂತ್ರ್ಯ ಪೂರ್ವದಲ್ಲಿ. ನಂಜೇಗೌಡ ಎಂಬುವರು ನನಗೆ ಅಕ್ಷರಾಭ್ಯಾಸ ಮಾಡಿಸಿದರು. ಕನ್ನಡ ಓದು ಬರೆಯುವುದು, ಲೆಕ್ಕ ಮಾಡುವುದನ್ನು ಹೇಳಿಕೊಟ್ಟಿದ್ದರು. ಶಾಲೆ ಬಿಟ್ಟ ನಂತರ ಎಮ್ಮೆ ಮೇಯಿಸುತ್ತಿದ್ದ ನನ್ನನ್ನು ರಾಜಪ್ಪ ಎಂಬ ಮೇಷ್ಟ್ರು ಮನೆಗೆ ಬಂದು ನೇರವಾಗಿ 5ನೇ ತರಗತಿಗೆ ಸೇರಿಸಿದ್ದರು. 8ನೇ ತರಗತಿ ಓದಲು ಕುಪ್ಪೆಗಾಲಕ್ಕೆ ಹೋಗುತ್ತಿದ್ದೆ. ಪ್ರೌಢ ಶಾಲೆಗೆ ವಿದ್ಯಾವರ್ಧಕ ಶಾಲೆಗೆ ಸೇರಿದ್ದೆ. ನಿಮಗಿರುವ ಸೌಲಭ್ಯ ನಮಗಿರಲಿಲ್ಲ. ಶಾಲೆಯ ದಾಖಲೆಗಳಲ್ಲಿ ನನ್ನ ಹುಟ್ಟಿದ ದಿನಾಂಕ 3-8- 1947 ಎಂದು ನಮೂದಾಗಿದೆ.

ಈಗ ಸರ್ಕಾರ ಹಾಲು, ಮೊಟ್ಟೆ, ಚಿಕ್ಕಿ, ಬಿಸಿಯೂಟ, ಸಮವಸ್ತ್ರ ನೀಡುತ್ತಿದೆ. ನಮ್ಮ ಕಾಲದಲ್ಲಿ ಶಿಕ್ಷಕರಿಂದ ಏಟನ್ನೂ ತಿನ್ನುತ್ತಿದ್ದೆವು. ಅಂದಿನ ಹೆಣ್ಣು ಮಕ್ಕಳು ಹೆಚ್ಚಾಗಿ ಓದುತ್ತಿರಲಿಲ್ಲ ಆದರೆ ಇಂದು ಈ ಸ್ಥಿತಿ ಬದಲಾಗಿದೆ. ಈಶ್ವರಾಚಾರ್ ಎಂಬ ಮೇಸ್ಟ್ರು ಹೇಳಿಕೊಟ್ಟಿದ್ದ ಕನ್ನಡ ವ್ಯಾಕರಣವನ್ನು ನಾನು ಈಗಲೂ ಮರೆತಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...