Wednesday, October 2, 2024
Wednesday, October 2, 2024

DC Shivamogga ಮರಳು ನೀತಿಯನ್ನ ನವೀಕರಿಸಿ ಸಾರ್ವಜನಿಕರಿಗೆ ಮರಳು ಶೀಘ್ರ ಲಭ್ಯವಾಗಲು ಕ್ರಮಕೈಗೊಳ್ಳಿ- ಗುರುದತ್ ಹೆಗಡೆ

Date:

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಅವಧಿ ಮುಗಿದಿರುವ ಮರಳು ನಿಕ್ಷೇಪಗಳಿಗೆ ಮರಳು ನೀತಿಯನ್ವಯ ಮಾರ್ಗಸೂಚಿಗಳನ್ನು ಸಿದ್ದಪಡಿಸಿ ನವೀಕರಣಗೊಳಿಸಿ ಆದಷ್ಟು ಶೀಘ್ರದಲ್ಲಿ ಮರಳು ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್ ಫೋರ್ಸ್, ಜಿಲ್ಲಾ ಮರಳು ಸಮಿತಿ ಮತ್ತು ಜಿಲ್ಲಾ ಕ್ರಷರ್ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಧಿಕೃತವಾಗಿ ಸಾರ್ವಜನಿಕರಿಗೆ ಮರಳು ಲಭ್ಯವಾಗುವಂತೆ ಕ್ರಮ ವಹಿಸಬೇಕು ಹಾಗೂ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ ಕಟ್ಟುನಿಟ್ಟಾಗಿ ಪರಿಶೀಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಸ್‍ಪಿ ಮಿಥುನ್ ಕುಮಾರ್‍ರವರು, ಅಕ್ರಮ ಗಣಿಗಾರಿಕೆ ತಡೆಯಲು ಗಸ್ತು, ಪೊಲೀಸರನ್ನು ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ ಅವರು ಒಂದು ಉಸ್ತುವಾರಿ ತಂಡ ರಚಿಸುವಂತೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಸರ್ಕಾರಿ ಕಾಮಗಾರಿಗಳಿಗೆ ಮರಳು ಪೂರೈಕೆ ಸಂಬಂಧ ಬ್ಲಾಕ್‍ಗಳನ್ನು ನಿಗದಿಪಡಿಸಬೇಕು. ಕಡಿಮೆ ಕಾಮಗಾರಿ ಇರುವೆಡೆ ಒಂದು ಬ್ಲಾಕ್ ಹಾಗೂ ಕಾಮಗಾರಿಗಳನ್ನು ನೋಡಿಕೊಂಡು ಅದಕ್ಕನುಗುಣವಾಗಿ ಹಾಗೂ ಕಾಮಗಾರಿಗಳ ವಿವರ ಮತ್ತು ಬೇಡಿಕೆಗಳನ್ನು ಪರಿಶೀಲಿಸಿ ಬ್ಲಾಕ್‍ಗಳನ್ನು ಮೀಸಲಿಡುವಂತೆ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೊಸ ಮರಳು ನೀತಿ 2020 ರಂತೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 1 ವರ್ಷ ಅವಧಿಗೆ ಮರಳು ಎತ್ತುವಗಳಿ ಮಾಡಲು ಈಗಾಗಲೇ ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ ಮತ್ತು ಶಿಕಾರಿಪುರದ 70 ಬ್ಲಾಕ್‍ಗಳಲ್ಲಿ ಅನುಮತಿ ನೀಡಲಾಗಿದೆ. ಐದು ವರ್ಷ ಪೂರ್ಣಗೊಳಿಸಿರುವ 35 ಬ್ಲಾಕ್‍ಗಳಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅನುಮತಿ ನೀಡಲು ಮಾರ್ಗಸೂಚಿಗಳನ್ನು ಸಿದ್ದಪಡಿಸುವಂತೆ ತಿಳಿಸಿದರು.

ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು 1994, ತಿದ್ದುಪಡಿ ನಿಯಮಗಳು 2016ರನ್ವಯ ಇ-ಟೆಂಡರ್ ಕಂ ಹರಾಜು ಮೂಲಕ ವಿಲೇಪಡಿಸಲಾಗಿದ್ದ ಮರಳು ಬ್ಲಾಕ್‍ಗಳಿಗೆ ಗುತ್ತಿಗೆ ಮಂಜೂರು ಮಾಡುವ ಮುನ್ನ ಎನ್‍ಓಸಿ, ಇತರೆ ದಾಖಲಾತಿಗಳನ್ನು ಪರಿಶೀಲಿಸಿ ಮಂಜೂರು ಮಾಡುವಂತೆ ತಿಳಿಸಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸೀನರ್ ಜಿಯಾಲಜಿಸ್ಟ್ ನವೀನ್ ಮಾತನಾಡಿ, 2023-24 ನೇ ಸಾಲಿಗೆ, ಗಣಿಗಾರಿಕೆ ಇಲಾಖೆ ರಾಜಸ್ವ ಗುರಿ 35 ಕೋಟಿ ಇದ್ದು 2024 ರ ಫೆಬ್ರವರಿ ಅಂತ್ಯದವರೆಗೆ ರೂ. 31 ಕೋಟಿ ರಾಜಸ್ವ ಸಂಗ್ರಹ ಆಗಿದ್ದು ಶೇ. 106.53 ಪ್ರಗತಿ ಸಾಧಿಸಲಾಗಿದೆ.

ಅಕ್ರಮ ಉಪಖನಿಜ ಗಣಿಗಾರಿಕೆ/ಸಾಗಾಣಿಕೆ/ದಾಸ್ತಾನು ಕುರಿತು ಗಣಿ ಹಾಗೂ ಪೋಲೀಸ್ ಇಲಾಖೆಯಿಂದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಫೆ. ಅಂತ್ಯದವರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವತಿಯಿಂದ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸಾಮಾನ್ಯ ಮರಳು, ಕಟ್ಟಡ ಕಲ್ಲು ಇತರೆ ಸೇರಿ ಒಟ್ಟು 44 ಪ್ರಕರಣ ಪತ್ತೆ ಹಚ್ಚಲಾಗಿದ್ದು, 8 ಪ್ರಕರಣ ದ ಮೊಕದ್ದಮೆ ದಾಖಲಿಸಿದ್ದು ರೂ.34.82 ಲಕ್ಷ ದಂಡ ಸಂಗ್ರಹಿಸಲಾಗಿದೆ. ಅಕ್ರಮ ಸಾಗಾಣಿಕೆಯಲ್ಲಿ 166 ಪ್ರಕರಣ ಪತ್ತೆ ಹಚ್ಚಿ ರೂ.55.16 ಲಕ್ಷ ದಂಡ ಮತ್ತು ಅಕ್ರಮ ದಾಸ್ತಾನು ಸಂಬಂಧ ರೂ.6.35 ದಂಡ ಸಂಗ್ರಹಿಸಲಾಗಿದೆ.

DC Shivamogga ಪೊಲೀಸ್ ಇಲಾಖೆ ವತಿಯಿಂದ ಅಕ್ರಮ ಸಾಗಾಣಿಕೆಗೆ ಸಂಬಂಧಿಸಿದಂತೆ ಸಾಮಾನ್ಯ ಮರಳು, ಕಟ್ಟಡ ಕಲ್ಲು ಇತರೆ ಸೇರಿ ಒಟ್ಟು 80 ಪ್ರಕರಣ ಪತ್ತೆ ಹಚ್ಚಿ ರೂ.24.45 ಲಕ್ಷ ದಂಡ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿಗಳು, ಪಟ್ಟಾ ಜಮೀನಿನಲ್ಲಿ ಕಟ್ಟಡ ಕಲ್ಲು ಮಂಜೂರಾತಿ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಅರ್ಜಿಗಳಿಗೆ ಅನುಮತಿ ನೀಡಿದರು. ಹಾಗೂ ಕರ್ನಾಟಕ ಕಲ್ಲು ಪುಡಿ ಮಾಡುವ ಘಟಕಗಳ ನಿಯಂತ್ರಣ ಅಧಿನಿಯಮ 2011, ತಿದ್ದುಪಡಿ ನಿಯಮಗಳು 2020 ರನ್ವಯ ಜಲ್ಲಿ ಕ್ರಷರ್ ಘಟಕಗಳ ಅವಧಿಯನ್ನು 20 ವರ್ಷಗಳಿಗೆ ವಿಸ್ತರಿಸಲು ಸಲ್ಲಿಸಲಾಗಿದ್ದ ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹ ಅರ್ಜಿಗಳಿಗೆ ಷರತ್ತುಗಳನ್ನು ವಿಧಿಸಿ ಅನುಮೋದನೆ ನೀಡಿದರು.

ಸಭೆಯಲ್ಲಿ ಜಿ.ಪಂ.ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಸಾಗರ ಎಸಿ ದಿನೇಶ್, ಗಣಿ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...