Lok Sabha Constituency ಹಿರಿಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬಿಜೆಪಿ ಸೇರಿಯೇ ಬಿಡುತ್ತಾರೆ ಎನ್ನುವ ಚರ್ಚೆ ಕಳೆದ ತಿಂಗಳು ಜೋರಾಗಿತ್ತು. ಅದರಲ್ಲೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿದ ಮೇಲೆ ಲಕ್ಷ್ಮಣ ಸವದಿ ಕೂಡ ಅವರನ್ನು ಹಿಂಬಾಲಿಸುತ್ತಾರೆ ಎನ್ನುವ ಚರ್ಚೆಗಳು ನಡೆದಿದ್ದವು. ಅವರಿಗೆ ಸಚಿವ ಸ್ಥಾನವನ್ನೂ ನೀಡಲಾಗುತ್ತದೆ ಎನ್ನುವ ಚರ್ಚೆಗಳಿಗೇನೂ ಕಡಿಮೆ ಇಲ್ಲ. ಆದರೆ ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನಲ್ಲಿ ಬುಧವಾರ ನಡೆದ ನಾನಾ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ವೇಳೆ ಲಕ್ಷ್ಮಣ ಸವದಿ ಅವರ ಸಚಿವಸ್ಥಾನ ಕುರಿತು ಚರ್ಚೆಗಳೂ ನಡೆದವು.
ಲಕ್ಷ್ಮಣ ಸವದಿ ಅವರಿಗೆ ಕಾಂಗ್ರೆಸ್‌ನಲ್ಲಿಯೇ ಉತ್ತಮ ಭವಿಷ್ಯದಿಂದ ತಾಳ್ಮೆಯಿಂದ ಕಾಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರೆ. ಅವರನ್ನು ಸಚಿವರನ್ನಾಗಿ ಮಾಡಬೇಕು ಎನ್ನುವುದು ನಮ್ಮೆಲ್ಲರ ಬಯಕೆ. ನಿಮ್ಮ ಬಯಕೆಯೂ ಇದೆ. ಆಗಿದೆ. ಇದಕ್ಕಾಗಿ ಸ್ವಲ್ಪ ದಿನ ಕಾಯಲೇಬೇಕು.ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬನ್ನಿ. ಸವದಿ ಅವರಿಗೆ ಸಚಿವ ಸ್ಥಾನ ನೀಡೋಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ,
Lok Sabha Constituency 500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು. ಇದರಿಂದ ಅಥಣಿ ತಾಲ್ಲೂಕಿನ ಶೇ95 ರಷ್ಟು ಭೂಮಿ, ಅಂದರೆ 50 ಸಾವಿರ ಎಕರೆ ಜಮೀನು ನೀರಾವರಿ ಸೌಲಭ್ಯ ಪಡೆಯಲಿವೆ ಎಂದು ನುಡಿದರು.