Wednesday, September 16, 2026
Wednesday, September 16, 2026

Shivamogga Court ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ: ಶಿವಮೊಗ್ಗ ಕೋರ್ಟ್ ತೀರ್ಪು

Date:

Shivamogga Court ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಶಿವಮೊಗ್ಗದ FTSC-1 ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದೆ.
2021ನೇ ಸಾಲಿನಲ್ಲಿ ಸೊರಬ ತಾಲ್ಲೂಕಿನ ವಾಸಿ 35 ವರ್ಷದ ವ್ಯಕ್ತಿಯು 14 ರ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಈ ಬಗ್ಗೆ ನೊಂದ ಬಾಲಕಿಯು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು‌ . ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿ‌, ಸಿಪಿಐ ರಾಜಶೇಖರ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹರಿಪ್ರಸಾದ್, ವಿಶೇಷ ಸರ್ಕಾರಿ ಅಭಿಯೋಜಕ ವಾದ ಮಂಡಿಸಿದ್ದು, ವಿಚಾರಣೆ ನಡೆದು, ಆರೋಪಿ ವಿರುದ್ಧ ಆರೋಪ ದೃಢ ಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧಿಶೆ ಲತಾ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60,000/- ರೂ ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 4 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿದ್ದು ಮತ್ತು ದಂಡದ ಮೊತ್ತದಲ್ಲಿ Shivamogga Court 50,000 ರೂ ಹಾಗೂ ಸರ್ಕಾರದಿಂದ 4,00,000 ರೂ ಸೇರಿ ಒಟ್ಟು 4,50,000 ರೂ ಗಳನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡಲು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...