Voting awareness ಮತದಾನ ಜಾಗೃತಿ ಹಿನ್ನೆಲೆಯಲ್ಲಿ ಮಾಣಿ ಪಿರಾಜೆ ಬಾಲ ವಿಕಾಸ ಆಂಧ್ರ ಮಾಧ್ಯಮ ಶಾಲೆ ವಿದ್ಯಾರ್ಥಿ ಬರೆದ ಪತ್ರಕ್ಕೆ ಸ್ಪಂದಿಸಿರುವ ಚುನಾವಣೆ ಆಯೋಗವು, ಪ್ರಸ್ತಾವನೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ದ. ಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಆದೇಶಿಸಿದೆ.
ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರವನ್ನು ನಾರ್ಮಲ್ ಬಂಟ್ವಾಳ ಗ್ರಾಮದ ಕಶೆ ಕೋಡಿ ನಿವಾಸಿ ಆಗಿರುವ ವಿದ್ಯಾರ್ಥಿನಿ ಸನ್ನಿಧಿ.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ತನ್ನ ಸ್ನೇಹಿತರ ಜೊತೆಗೂಡಿ ಬಾಳ್ತಿಲ ಭಾಗದಲ್ಲಿ ಮತದಾನದ ಕುರಿತು ಜಾಗೃತಿ ಕಾರ್ಯ ಮಾಡಿದ್ದು, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಶೇಕಡ ನೂರರಷ್ಟು ಮತದಾನ ವಾಗುವ ಜಾಗೃತಿ ಕಾರ್ಯ ಮೂಡಿಸುವ ಅವಕಾಶ ನೀಡಲು ದ. ಕ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಅರಿವು ಹಾಗೂ ಜಾಗೃತಿ ಕೈಗೊಳ್ಳುವ ಸ್ವಿಫ್ಟ್ ಕಾರ್ಯಕ್ರಮಗಳಲ್ಲಿ ಸನ್ನಿಧಿಯ ಪ್ರಸ್ತಾವನೆ ಪರಿಶೀಲಿಸಬೇಕು ಎಂದು ದ.ಕ ಜಿಲ್ಲಾ ಚುನಾವಣೆ ಅಧಿಕಾರಿಗಳು
ಮತ್ತು ಜಿಲ್ಲಾ ಸ್ವಪ್ನ ನೋಡಲ್ ಅಧಿಕಾರಿಯಾಗಿರುವ ಜಿ.ಪಂ ಸಿಇಒ ಗೆ ಪತ್ರ ಬರೆದಿದ್ದಾರೆ.
Voting awareness ಚುನಾವಣೆ ಸಂದರ್ಭ ಯಾವುದೇ ರಾಜಕೀಯ ವ್ಯಕ್ತಿ ಹಾಗೂ ಪಕ್ಷದ ಪರವಾಗಿರದೆ ತಟಸ್ಥವಾಗಿರುವ ಕಾರ್ಯಕ್ರಮ ಆಯೋಜಿಸುವ ಸಂಬಂಧ, ವಿವಿಧ ಫ್ಲಿಪ್ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಅಗತ್ಯ ಸಲಹೆ ಹಾಗೂ ಸಹಕಾರವನ್ನು ನೀಡಲು ಸನ್ನಿಧಿ ಅವರ ಪ್ರಸ್ತಾವನೆ ಪರಿಶೀಲನೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಂದಿನ ಕಾರ್ಯದರ್ಶಿಗಳಾದ ಮಧು ಎಸಿ ಅವರು ಪತ್ರ ಬರೆದು ಆದೇಶಿಸಿದ್ದಾರೆ.