Maha Shivaratri ಹಿಂದೂಗಳ ಪ್ರಮುಖ ಹಬ್ಬಗಳ ಪೈಕಿ ಮಹಾ ಶಿವರಾತ್ರಿ ಕೂಡಾ ಒಂದು.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯ ದಿನ ಶಿವನನ್ನು ಪೂಜಿಸುವ ಸಂಪ್ರದಾಯವಿದೆ.
ಶಿವರಾತ್ರಿ ದಿನ ಜಗತ್ತಿನಾದ್ಯಂತ ಹಿಂದೂಗಳು ಈಶ್ವರನನ್ನು ಆರಾಧಿಸುತ್ತಾರೆ. ಮಹಾಶಿವರಾತ್ರಿಯ ದಿನ ಶಿವನ ಭಕ್ತರು ಉಪವಾಸ ಕೈಗೊಳ್ಳುವ ಮೂಲಕ, ಧ್ಯಾನ , ಜಾಗರಣೆಗಳನ್ನು ಮಾಡುವ ಮೂಲಕ ಶಿವನನ್ನು ಆರಾಧಿಸುತ್ತಾರೆ.
ಈ ದಿನ ಶಿವನ ದೇಗುಲದಲ್ಲಿ ಭಕ್ತರು ರಾತ್ರಿಯಿಡೀ ಜಾಗರಣೆ ಕೈಗೊಂಡು ಈಶ್ವರನನ್ನು ಆರಾಧಿಸುತ್ತಾರೆ.
ಮಹಾ ಶಿವರಾತ್ರಿಯ ದಿನದಂದು ಶಿವನನ್ನು ಆರಾಧಿಸುವವರು ದಿನವಿಡೀ ಉಪವಾಸ ಇರುತ್ತಾರೆ. ಇದು ಮಹಿಳೆಯರಿಗೆ ಅತ್ಯಂತ ವಿಶೇಷವಾದ ಹಬ್ಬವಾಗಿದೆ. ವಿವಾಹಿತ ಮಹಿಳೆಯರು ಈ ದಿನದಂದು ಶಿವನ ಬಳಿಯಲ್ಲಿ ತಮ್ಮ ಪತಿಯ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾರೆ. ಅವಿವಾಹಿತೆಯರು ಭವಿಷ್ಯದಲ್ಲಿ ತಮಗೆ ಶಿವನಂತಾ ಪತಿ ಸಿಗಲಿ ಎಂದು ಬೇಡಿಕೊಳ್ಳುತ್ತಾರೆ.
Maha Shivaratri ಮಹಾ ಶಿವರಾತ್ರಿಯಂದು ದೇಗುಲಗಳಲ್ಲಿ ವಿವಿಧ ಆಚರಣೆಗಳನ್ನು ಮಾಡಲಾಗುತ್ತದೆ. ಶಿವನು ಅಭಿಷೇಕಪ್ರಿಯನಾದ್ದರಿಂದ ನಾನಾ ಅಭಿಷೇಕ ಮಾಡಲಾಗುತ್ತದೆ. ಹಾಲು, ಜೇನುತುಪ್ಪ, ಹೂವುಗಳು ಹಾಗೂ ಬಿಲ್ವ ಪತ್ರೆಯನ್ನು ಶಿವನಿಗೆ ಅರ್ಪಿಸಲಾಗುತ್ತದೆ. ಈ ದಿನ ಶಿವನ ಭಕ್ತರು ಏನನ್ನೂ ತಿನ್ನುವುದು ಅಥವಾ ಕುಡಿಯುವುದು ಮಾಡುವುದಿಲ್ಲ. ಕೆಲವರು ರಾತ್ರಿಯಿಡೀ ಜಾಗರಣೆಯಿದ್ದು ಶಿವನ ಧ್ಯಾನ ಮಾಡುತ್ತಿರುತ್ತಾರೆ, ಈ ದಿನ ಶಿವನ ದೇಗುಲ ಕಿಕ್ಕಿರಿದು ತುಂಬಿರುತ್ತದೆ. ಮಹಾ ಮೃತ್ಯುಂಜಯ ಮಂತ್ರ ಹಾಗೂ ಶಿವ ತಾಂಡವ ಸ್ತೋತ್ರದಂತಹ ಮಂತ್ರಗಳನ್ನು ಪಠಿಸುವ ಮೂಲಕ ಮಹಾದೇವನ ಕೃಪೆಗೆ ಭಕ್ತರು ಪಾತ್ರರಾಗುತ್ತಾರೆ.