Sunday, December 14, 2025
Sunday, December 14, 2025

Kateel Ashok Pai Memorial College ಲಿಂಗ ಅಸಮಾನತೆ ಸಮಾಜದ ಅಭಿವೃದ್ಧಿಗೆ ಅಡೆತಡೆ ಎಲ್ಲರೂ ಸಮಾನತೆ ಸಾಧಿಸಬೇಕು- ಚಂದ್ರಶೇಖರ್ ಶೃಂಗೇರಿ

Date:

Kateel Ashok Pai Memorial College ಮಾನಸ ಟ್ರಸ್ಟ್ರ್ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಮನ; ಶಾಸ್ತ್ರ ವಿಭಾಗ, ಮಾನಸಾಧಾರ ಪುನರ್ವಸತಿ ಕೇಂದ್ರ ಹಾಗೂ ವಿಜಯವಾಣಿ ದಿನ ಪತ್ರಿಕೆಯ ಸಹಯೋಗದೊಂದಿಗೆ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಜಯವಾಣಿಯ ಶಿವಮೊಗ್ಗದ ಸಾಂಸ್ಥಿಕ ಸಂಪಾದಕರಾದ ಶ್ರೀ ಚಂದ್ರಶೇಖರ್ ಶೃಂಗೇರಿ ರವರು ಲಿಂಗ ಸಮಾನತೆಯನ್ನು ಸಾಧಿಸುವುದು ಅಭಿವೃದ್ಧಿಯ ಬಹಳ ಮುಖ್ಯ ತಳಹದಿ ಎಂದು ತಿಳಿಸಿದರು. ಲಿಂಗ ಅಸಮಾನತೆ ಎಂಬುದು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಅಡೆತಡೆ. ಸಮಾನತೆಯನ್ನು ಸಾಧಿಸಲು ನಾವೆಲ್ಲರೂ ಬದ್ಧರಾಗಿರಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಡಯಾಗ್ನೋಸ್ಟಿಕ್‌ನ ಡಾಕ್ಟರ್ ಕೌಸ್ತುಭ ರವರು ಮಹಿಳೆ ಮತ್ತು ಆರೋಗ್ಯ ಎಂಬ ವಿಷಯದ ಕುರಿತು ಮಾಹಿತಿಯನ್ನು ನೀಡಿ ವಿದ್ಯಾರ್ಥಿನಿಯರೊಂದಿಗೆ ಸಂವಾದವನ್ನು ನಡೆಸಿದರು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ತಳಮಟ್ಟದಲ್ಲಿ ಸಾಧನೆಯನ್ನು ಮಾಡಿರುವ ಐವರನ್ನು ಗುರುತಿಸಿ ಸನ್ಮಾನಿಸಲಾಯಿತು. ಮಾನಸಾಧಾರದಲ್ಲಿ 30 ವರ್ಷಗಳಿಗೂ ಹೆಚ್ಚು ಕಾಲ ಆರೋಗ್ಯ ಸೇವಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಜಯಮ್ಮ, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿ ನಿಲಯದ ವಾರ್ಡನ್ ಶ್ರೀಮತಿ ಧನಲಕ್ಷ್ಮಿ, ಹಿರಿಯ ಪೌರ ಕಾರ್ಮಿಕ ಸಹಾಯಕಿ ಶ್ರೀಮತಿ ವೆಂಕಟಮ್ಮ, ಗೃಹ ಉದ್ಯಮಿ ಶ್ರೀಮತಿ ನಾಗಲಕ್ಷ್ಮಿ ಹಾಗೂ ಸ್ಪೀಕ್ ಫಾರ್ ಇಂಡಿಯಾ ಡಿಬೇಟ್ ಸ್ಪರ್ಧೆ ಯಲ್ಲಿ ರಾಜ್ಯಮಟ್ಟದಲ್ಲಿ ಭಾಗವಹಿಸಿದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿನಿ ಸ್ಪೂರ್ತಿ ವೈ. ಹೆಚ್. ಇವರನ್ನು ಮಾನಸದ ನಿರ್ದೇಶಕರಾದ ಡಾಕ್ಟರ್ ರಜನೀ ಎ ಪೈರವರು ಸನ್ಮಾನಿಸಿದರು.

Kateel Ashok Pai Memorial College ಎಲ್ಲ ಸನ್ಮಾನಿತರು ಜೀವನದಲ್ಲಿ ತಾವು ಸ್ವಾವಲಂಬಿಗಳಾಗಿ ಗೌರವದಿಂದ ಬಾಳಲು ತಮ್ಮ ಆತ್ಮಸ್ಥೈರ್ಯ ಹಾಗೂ ಕುಟುಂಬದ ಬೆಂಬಲ ಕಾರಣ ಎಂದು ತಮ್ಮ ಅನಿಸಿಕೆಯನ್ನು ತಿಳಿಸಿದರು. ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಈ ವರ್ಷದ ಘೋಷ ವಾಕ್ಯದಂತೆ ದೇಶದ ಪ್ರಗತಿಗಾಗಿ ಮಹಿಳೆಯರ ಅಭಿವೃದ್ಧಿಗೆ ಹೂಡಿಕೆ ಮಾಡುವುದು ಅಗತ್ಯ ಹಾಗೂ ಅನಿವಾರ್ಯ ಎಂದರು.

ಇಂತಹ ಹೂಡಿಕೆ ಮಾನಸಿಕ ಸಾಮಾಜಿಕ ಹಾಗೂ ಆರ್ಥಿಕ ಅಂಶಗಳೆಲ್ಲವನ್ನು ಒಳಗೊಂಡಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಮನ: ಶಾಸ್ತ್ರ ವಿಭಾಗದ ಡಾ.ಅರ್ಚನಾ ಭಟ್, ಮಾನಸಾಧಾರದ ಮನೋವೈದ್ಯರಾದ ಡಾ.ಪ್ರವೀಣ್, ಕಾಲೇಜಿನ ಸಮಾಜ ಕಾರ್ಯ ಮುಖ್ಯಸ್ಥರಾದ ಶ್ರೀ ಮಂಜುನಾಥಸ್ವಾಮಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕು.ಬಿಂದು ಕಾರ್ಯಕ್ರಮ ನಿರೂಪಿಸಿ, ಸುಮಂತ್ ಸ್ವಾಗತಿಸಿ, ಕೀರ್ತನಾ ವಂದಿಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಎಲ್ಲಾ ವಿದ್ಯಾರ್ಥಿಗಳೊಂದಿಗೆ ಮಾನಸಾಧಾರದ ಮಹಿಳಾ ನಿಲಯವಾಸಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಅರ್ಥಪೂರ್ಣವಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...