Thursday, March 19, 2026
Thursday, March 19, 2026

Siddaramaiah ಸೋಲಾರ್ ಪಂಪ್ ಸೆಟ್ & ಪ್ಯಾನಲ್ ಗಳಿಗೆ ರಾಜ್ಯ ಸರ್ಕಾರದ ಸಬ್ಸಿಡಿ ಹೆಚ್ಚಳ- ಸಿದ್ಧರಾಮಯ್ಯ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಜಿ.ಕೆ.ವಿ.ಕೆ ಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈತ ಸೌರಶಕ್ತಿ ಮೇಳ ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲೇ ಅತಿ ಹೆಚ್ಚು ಒಣಭೂಮಿ ಹೊಂದಿರುವ ಎರಡನೇ ರಾಜ್ಯ ಕರ್ನಾಟಕ. ಹೀಗಾಗಿ ಒಣಭೂಮಿಯ ಕೃಷಿಗೆ ಆದ್ಯತೆ ನೀಡಿ ಸಂಶೋಧನೆಗಳು ನಡೆಯಬೇಕು. ಜನಸಂಖ್ಯೆ ಹೆಚ್ಚಾಗಿ ರೈತರ ಬೆಳೆಗಳ ಇಳುವರಿ ಪ್ರಮಾಣ ಕಡಿಮೆ ಆಗುತ್ತಿದೆ. ಆದ್ದರಿಂದ ಸಮಗ್ರ ಕೃಷಿಗೆ ಹೆಚ್ಚಿನ ಬೆಂಬಲ ನೀಡುವ ಸಲುವಾಗಿ ಕೃಷಿಯ ಉಪಕಸುಬುಗಳ ಬೆಳವಣಿಗೆಗೆ ಸರ್ಕಾರ ಸಂಪೂರ್ಣ ಸಹಕಾರ, ಬೆಂಬಲ ನೀಡುತ್ತಿದೆ ಎಂದು ಹೇಳಿದರು.

ಪ್ರಸ್ತುತ ರಾಜ್ಯದಲ್ಲಿ 32 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಮುಂದಿನ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ.‌
ಸೋಲಾರ್ ವಿದ್ಯುತ್ ಪಂಪ್ ಸೆಟ್ ಮತ್ತು ಪ್ಯಾನಲ್ ಗಳಿಗೆ ರಾಜ್ಯ ಸರ್ಕಾರದ ಸಬ್ಸಿಡಿ ಮೊತ್ತವನ್ನು ಶೇ.30 ರಿಂದ ಶೇ.50 ಕ್ಕೆ ಹೆಚ್ಚಿಸಿದೆ. ನಮ್ಮ ಸರ್ಕಾರದ ಈ ಸೌಲಭ್ಯವನ್ನು ರೈತರು ಹೆಚ್ಚೆಚ್ಚು ಬಳಸಿಕೊಳ್ಳಬೇಕು.
ಸೌರವಿದ್ಯುತ್ ಬಳಕೆಯನ್ನು ಹೆಚ್ಚೆಚ್ಚು ಮಾಡುವ ಮೂಲಕ ವಿದ್ಯುತ್ ಕೊರತೆಯನ್ನು ನೀಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ಈ ಬಗ್ಗೆ ರೈತರಿಗೆ ಹೆಚ್ಚೆಚ್ಚು ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.

ಇವತ್ತಿನವರೆಗೂ ನಾಡಿನ ಒಂದು ಕೋಟಿ ಇಪ್ಪತ್ತು ಲಕ್ಷ ಕುಟುಂಬಗಳು ಬಳಸುತ್ತಿರುವ 200 ಯೂನಿಟ್ ವರೆಗಿನ ಉಚಿತ ವಿದ್ಯುತ್ ಗಾಗಿ ರಾಜ್ಯ ಸರ್ಕಾರ ಉಚಿತ ವಿದ್ಯುತ್ತಿನ ಬಾಬ್ತು 5,320 ಕೋಟಿ ರೂಪಾಯಿಯನ್ನು ಇಂಧನ ಇಲಾಖೆಗೆ ನೀಡಿದೆ. ನಮ್ಮ ಜನರಿಗೆ ಜೀರೋ ಬಿಲ್ ಬರುತ್ತಿದೆ. ನಮ್ಮ ಸರ್ಕಾರ ಈ ಜನೋಪಯೋಗಿ ಗ್ಯಾರಂಟಿ ಯೋಜನೆಯನ್ನು ಯಶಸ್ವಿಯಾಗಿ ಮುಂದುವರೆಸಲಿದೆ.
ಸೌರಶಕ್ತಿ ಕ್ಷೇತ್ರದ ಹೊಸ ಆವಿಷ್ಕಾರಗಳು, ತಂತ್ರಜ್ಞಾನಗಳು ರೈತರ ಮನೆ ಬಾಗಿಲಿಗೆ ತಲುಪಿ, ಕೃಷಿಯಲ್ಲಿ ಬಳಕೆ ಆದರೆ ಮಾತ್ರ ಸಾರ್ಥಕತೆ ಬರುತ್ತದೆ. ಕೃಷಿ ಕ್ಷೇತ್ರದಲ್ಲಿ ಹೆಚ್ಚೆಚ್ಚು ಸಂಶೋಧನೆಗಳು ನಡೆದು ಅವು ರೈತರನ್ನು ಮುಟ್ಟಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರೈತರು ಹೆಚ್ಚೆಚ್ಚು ಆಹಾರ ಬೆಳೆದು ವಿದೇಶಕ್ಕೂ ರಫ್ತು ಮಾಡುವಂತಾಗಬೇಕು. ಇದಕ್ಕೆ ನಮ್ಮ ಸರ್ಕಾರ ಸಕಲ ನೆರವು ನೀಡುತ್ತದೆ.
ಸೋಲಾರ್ ವಿದ್ಯುತ್ ಗೆ ಕೇಂದ್ರ ಸರ್ಕಾರ ಕೇವಲ ಶೇ30 ರಷ್ಟು ಸಬ್ಸಿಡಿ ನೀಡುತ್ತಿದೆ. ಆದರೆ ರಾಜ್ಯ ಸರ್ಕಾರ ಶೇ.50 ರಷ್ಟು ಸಬ್ಸಿಡಿ Siddaramaiah ನೀಡುತ್ತಿದೆ. ಆದರೂ ಹೆಸರು ಮಾತ್ರ ಮೋದಿಯವರ ಸಬ್ಸಿಡಿ ಎನ್ನುತ್ತಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...