Wednesday, October 2, 2024
Wednesday, October 2, 2024

Sri Shivaganga Yoga Kendra  ಶಿವಗಂಗಾ ಯೋಗ ಕೇಂದ್ರದಲ್ಲಿ ವಿಶೇಷ ಮಹಾಶಿವರಾತ್ರಿ

Date:

Sri Shivaganga Yoga Kendra  ಮಹಾಶಿವರಾತ್ರಿ ಪ್ರಯುಕ್ತ ವಿನೋಬನಗರದ ಕಲ್ಲಳ್ಳಿಯ ಶ್ರೀ ಶಿವಗಂಗಾ ಯೋಗಕೇಂದ್ರದಲ್ಲಿ ಶಿವನಿಗೆ ವಿಶೇಷ ಪ್ರಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.

ಶಿವಗಂಗಾ ಯೋಗಕೇಂದ್ರದ ಎಲ್ಲ ಶಾಖೆಗಳ ಯೋಗಪಟುಗಳು ಭಾಗವಹಿಸಿ ಭಜನೆ ಹಾಗೂ ಭಕ್ತಿ ಗೀತೆಗಳನ್ನು ಹಾಡಿದರು.

ಶಿವಗಂಗಾ ಯೋಗಕೇಂದ್ರದ ಕಾರ್ಯದರ್ಶಿ ಎಸ್.ಎಸ್.ಜ್ಯೋತಿಪ್ರಕಾಶ್ ಮಾತನಾಡಿ, ನಾಡಿನಾದ್ಯಂತ ಮಹಾ ಶಿವರಾತ್ರಿಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಮ್ಮ ಯೋಗ ಕೇಂದ್ರದಲ್ಲಿ ಶಿವನ ಪ್ರತಿಮೆ ಸ್ಥಾಪಿಸಿದ್ದು, ಎರಡನೆಯ ವರ್ಷದ ಮಹಾಶಿವರಾತ್ರಿಯನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ಪ್ರತಿ ದಿನ ಶಿವನಾಮಸ್ಮರಣೆಯನ್ನು ಮಾಡುತ್ತ ಸನ್ಮಾರ್ಗದಲ್ಲಿ ನಡೆಯೋಣ ಎಂದು ತಿಳಿಸಿದರು.

ಡಾ ನಾಗರಾಜ ಪರಿಸರ ಮಾತನಾಡಿ, ಶಿವನು ಪ್ರಕೃತಿ ಪ್ರಿಯನು, ಎಲ್ಲ ಪ್ರಾಣಿ ಪಕ್ಷಿಗಳಿಗೂ ಬದುಕುವ ಹಕ್ಕಿದೆ. ಈ ನಿಟ್ಟಿನಲ್ಲಿ ನಾವು ಜಲ ಮಾಲಿನ್ಯ, ಪರಿಸರ ಮಾಲಿನ್ಯ ಮಾಡದೆ ಹೆಚ್ಚು ಹೆಚ್ಚು ಗಿಡ ಮರಗಳನ್ನು ಬೆಳೆಸಿ ಅಂತರ್ಜಲವನ್ನು ಹೆಚ್ಚಿಸುವ ಕಡೆ ಗಮನ ಹರಿಸಬೇಕು ಎಂದು ತಿಳಿಸಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ. ವಿಜಯಕುಮಾರ್ ಮಾತನಾಡಿ, ನಾವೆಲ್ಲ ಪ್ರತಿದಿನ ಯೋಗ ಮಾಡುವುದರಿಂದ ಆರೋಗ್ಯವಾಗಿದ್ದೇವೆ. ನಾವು ಮಾತ್ರ ಆರೋಗ್ಯವಾಗಿದ್ದರೆ ಸಾಲದು, ಎಲ್ಲರಿಗೂ ಯೋಗ ಮಾಡಲು ತಿಳಿಸಿ ಎಲ್ಲರೂ ಆರೋಗ್ಯವಾಗಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿ ಮಹಾಶಿವರಾತ್ರಿಯ ಶುಭಾಶಯಗಳನ್ನು ಕೋರಿದರು.

ಯೋಗ ಕೇಂದ್ರದ ಗುರು ಯೋಗಾಚಾರ್ಯ ರುದ್ರಾರಾಧ್ಯ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಿದವು. ಮುಂದಿನ ದಿನಗಳಲ್ಲಿ ಶಿವರಾತ್ರಿ ಸಂಭ್ರಮವನ್ನು ಮತ್ತಷ್ಟು ವಿಜೃಂಭಣೆಯಿಂದ ಮಾಡೋಣ ಎಂದು ತಿಳಿಸಿದರು.

ವಿವಿಧ ಭಜನಾ ಮಂಡಳಿಯ ಸದಸ್ಯರು ಭಜನೆ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಡಾ. ನಾಗರಾಜ ಪರಿಸರ ಅವರ ನೇತೃತ್ವದಲ್ಲಿ ಬೆಳಗಿನವರೆಗೆ ಜಾಗರಣೆಯನ್ನು ಮಾಡಲಾಯಿತು.

Sri Shivaganga Yoga Kendra  ವಿಶೇಷ ಪೂಜೆ ರುದ್ರಾಭಿಷೇಕ ಭಜನೆ ಧ್ಯಾನ ನೆರವೇರಿತು. ಸಾವಿರಕ್ಕೂ ಹೆಚ್ಚು ಯೋಗಪಟುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...