Monday, February 2, 2026
Monday, February 2, 2026

Health Organization ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

Health Organization ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೈದ್ಯರು -5, ಆಡಿಯೋಮೆಟ್ರೀಕ್ ಅಸಿಸ್ಟೆಂಟ್-1, ತಾಲ್ಲೂಕು ಆಶಾ ಮೇಲ್ವಿಚಾರಕರು -1, ಡಿಇಐಸಿ ಮ್ಯಾನೆಜರ್-1 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ದಿ: 19/03/2024ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿಯ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿಹೆಚ್ ರಸ್ತೆ ಶಿವಮೊಗ್ಗ ಇಲ್ಲಿ ಪಡೆದುಕೊಳ್ಳಬೇಕು. ಅದೇ ದಿನ ಈ ಎಲ್ಲ ಹುದ್ದೆಯ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಸಂಜೆ 5.30ರ ವರೆಗೆ ನಡೆಸಲಾಗುವುದು.
ವೈದ್ಯರು 70 ವರ್ಷಕ್ಕಿಂತ ಕಡಿಮೆ ಇದ್ದು ದೈಹಿಕವಾಗಿ ಎಲ್ಲಾ ಕರ್ತವ್ಯಗಳನ್ನು ನಿಭಾಯಿಸಲು ಅರ್ಹರಿರಬೇಕು ಹಾಗೂ ದೈಹಿಕ ಪ್ರಮಾಣ ಪತ್ರ ನೀಡುವುದು ಮತ್ತು ಕೆ.ಎಂ.ಸಿಯ ನೋಂದಣೆಯನ್ನು ಹೊಂದಿರತಕ್ಕದ್ದು. ಸರ್ಕಾರದ ನಿಯಮಾವಳಿ ಎನ್.ಹೆಚ್.ಎಂ ಮಾರ್ಗಸೂಚಿಯಂತೆ ಹುದ್ದೆವಾರು ವಯೋಮಿತಿ ಪರಿಗಣಿಸಲಾಗುವುದು. ಹುದ್ದೆಗಳಿಗೆ ನಮೂದಿಸಿರುವ ವೇತನದಲ್ಲಿ ಭವಿಷ್ಯ ನಿಧಿ/ವೃತ್ತಿ ತೆರಿಗೆ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವ ಪ್ರಕಾರ ತೆರಿಗೆಯನ್ನು ಇತ್ಯಾದಿ ಕಟಾವಣೆ ಮಾಡಲಾಗುವುದು. ಎನ್.ಹೆಚ್.ಎಂ ಮಾರ್ಗಸೂಚಿಯಂತೆ ನೇಮಕಾತಿಯು ಮೆರಿಟ್ ಕಂ ರೋಸ್ಟ್‍ರ್ ಆಧಾರದ ಮೇಲೆ ಮಾಡಲು ಕ್ರಮ ಕೈಗೊಳ್ಳಲಾಗುವುದು.
Health Organization ಅಭ್ಯರ್ಥಿಗಳು ಸಂಬಂಧಪಟ್ಟ ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ,ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಸ್ವವಿವರದೊಂದಿಗೆ ಹಾಜರಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ : 08182-200337 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಸಂಘದ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...