Saturday, October 17, 2026
Saturday, October 17, 2026

DAVANGERE UNIVERSITY ಖ್ಯಾತ ವಂಗ್ಯಚಿತ್ರಗಾರ, ವಾಗ್ಮಿ ಎಚ್.ಬಿ.ಮಂಜುನಾಥ್ ಅವರಿಗೆ ದಾವಣಗೆರೆ ವಿವಿ ಗೌರವ ಡಾಕ್ಟರೇಟ್ ಪ್ರದಾನ

Date:

DAVANGERE UNIVERSITY ಹಿರಿಯ ವ್ಯಂಗ್ಯಚಿತ್ರಕಾರ, ಪತ್ರಕರ್ತ ಎಚ್ ಬಿ ಮಂಜುನಾಥ್ ರವರ ಜೀವಮಾನ ಸಾಧನೆಯನ್ನು ಗುರುತಿಸಿ ದಾವಣಗೆರೆ ವಿಶ್ವವಿದ್ಯಾನಿಲಯವು ತನ್ನ 11ನೇ ಘಟಿಕೋತ್ಸವದಲ್ಲಿ ಎಚ್ ಬಿ ಮಂಜುನಾಥರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿ ಗೌರವಿಸಿತು.

ವಿಶ್ವ ವಿದ್ಯಾನಿಲಯದ ಕುಲಾಧಿಪತಿಗಳೂ, ರಾಜ್ಯಪಾಲರೂ ಆದ ಮಾನ್ಯ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ಮುಖ್ಯ ಅತಿಥಿಗಳಾಗಿ ಇಸ್ರೋದ ಮಾಜಿ ಅಧ್ಯಕ್ಷರು ಪದ್ಮಶ್ರೀ ಪುರಸ್ಕೃತರೂ ಆದ ಎ ಎಸ್ ಕಿರಣ್ ಕುಮಾರ್, ರಾಜ್ಯದ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ ಸಿ ಸುಧಾಕರ್ ಆಗಮಿಸಿದ್ದರು.

DAVANGERE UNIVERSITY ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಬಿ ಡಿ ಕುಂಬಾರ್ ಇದ್ದರು. ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿಗಳು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಅಧ್ಯಕ್ಷ ಜಸ್ಟಿಸ್ ಶಿವರಾಜ್ ಪಾಟೀಲ್ ಹಾಗೂ ಬೆಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ, ವಿಜ್ಞಾನಿ ಪ್ರೊ. ಕೆ ಸಿದ್ದಪ್ಪ ಇವರಿಗೂ ಇದೇ ಸಂದರ್ಭದಲ್ಲಿ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...