Sunday, August 23, 2026
Sunday, August 23, 2026

Chikkamagalur News ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಸ್ವಂತ ಬೋರ್ ವೆಲ್ ನ ನೀರಿನ ಖಾಸಗಿ ಮಾರಾಟದ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಒತ್ತಾಯ

Date:

Chikkamagalur News ಚಿಕ್ಕಮಗಳೂರು,ಜಿಲ್ಲೆಯ ಕೆಲವು ಭಾಗಗಳಲ್ಲಿ ಸ್ವಂತಕ್ಕೆoದು ಬೋರೆವೆಲ್ ಕೊರೆಸಿ ಟ್ಯಾಂಕರ್‌ಗಳ ಮೂಲಕ ನೀರನ್ನು ಖಾಸಗೀಯಾಗಿ ಮಾರಾಟ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಬುಧವಾರ ಉಪವಿಭಾಗಾಧಿಕಾರಿ ದಲ್ಜಿತ್‌ಕುಮಾರ್‌ಗೆ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಕಾಂಗ್ರೆಸ್ ಮುಖಂಡ ಕೆ.ಭರತ್ ಜಿಲ್ಲೆಯ ಬಹುತೇಕ ತಾಲ್ಲೂಕು ಬರಪೀಡಿತ ವಾಗಿ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಕೆಲವರು ಟ್ಯಾಂಕರ್ ಗಳಲ್ಲಿ ಅರ್ಧದಷ್ಟು ನೀರನ್ನು ತುಂಬಿಸಿ ಮನೋಸೋಇಚ್ಚೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಜಿಲ್ಲೆಯ ಗ್ರಾಮಾಂತರ, ಪಟ್ಟಣ ಹಾಗೂ ನಗರ ಭಾಗದಲ್ಲಿ ಕೆಲವು ಮಂದಿ ವೈಯಕ್ತಿಕ್ಕಾಗಿ ಬೋರೆವೆಲ್ ಕೊರೆಸಿಕೊಂಡು ಹಣ ಮಾಡುವ ದುರುದ್ದೇಶದಿಂದ ಮಾನವೀಯತೆ ಮರೆತು ಖಾಸಗೀಯಾಗಿ ನೀರನ್ನು ಮಾರಾ ಟ ಮಾಡಲಾಗುತ್ತಿದೆ. ಕೂಡಲೇ ಸಂಬoಧಪಟ್ಟ ಇಲಾಖಾಧಿಕಾರಿಗಳು ಕ್ರಮ ಜರುಗಿಸಬೇಕು ಎಂದರು.

ನೀರಿನ ಅಭಾವದಿಂದ ತತ್ತರಿಸಿರುವ ಪ್ರದೇಶಗಳಿಗೆ ಜಿಲ್ಲಾಡಳಿತ ಖುದ್ದಾಗಿ ತೆರಳಿ ಕುಡಿಯುವ ನೀರನ್ನು ಸರಬರಾಜು ಮಾಡಬೇಕು. ಬರಗಾಲದಲ್ಲೂ ಅಕ್ರಮವಾಗಿ ನೀರಿನ ವ್ಯವಹಾರದಲ್ಲಿ ತೊಡಗಿರುವವರ ವಿರುದ್ಧ ಕಡಿವಾಣ ಹಾಕುವ ಮೂಲಕ ಬೋರೆವೆಲ್ ನೀರು ಸ್ವಂತಕ್ಕೆ ಹೊರತು, ಮಾರಾಟಕ್ಕಲ್ಲ ಎಂದು ಪರವಾನಗಿ ಕೊಡ ಬೇಕು ಎಂದು ಒತ್ತಾಯಿಸಿದರು.

Chikkamagalur News ಜಿಲ್ಲೆಯು ಮಲೆನಾಡು, ಅರೆಮಲೆನಾಡು ಹಾಗೂ ಬಯಲುಸೀಮೆ ಒಳಗೊಂಡಿರುವ ಪ್ರದೇಶವಾಗಿದೆ. ಪ್ರಕೃತಿ ವಿಕೋಪದಿಂದ ಮಳೆ ಕ್ಷೀಣಿಸಿದೆ. ಅಲ್ಲದೇ ಕೆರೆಕಟ್ಟೆಗಳಲ್ಲಿ ನೀರಿಲ್ಲದೇ ಅಂತರ್ಜಲ ಕುಸಿತ ಕಂಡಿದೆ. ಮಳೆಯಿ ಲ್ಲದೇ ಅರಣ್ಯ ನಾಶವಾಗುತ್ತಿವೆ. ಕಾಡುಪ್ರಾಣಿಗಳು ಆಹಾರವಿಲ್ಲದೇ ನಾಡಿನತ್ತ ಧಾವಿಸುತ್ತಿವೆ ಎಂದು ಆತಂಕ ವ್ಯಕ್ತ ಪಡಿಸಿದರು.
ನಾಡಿನಲ್ಲಿ ಜನ ಜಾನುವಾರುಗಳಿಗೆ ನೀರಿನ ಅಭಾವ ತಲೆದೋರಿದೆ. ಹೀಗಾಗಿ ಸರ್ಕಾರ ಎಚ್ಚೆತ್ತುಕೊಂಡು ನೀರಿನ ಮೂಲಗಳನ್ನು ಅಭಿವೃಧ್ದಿಪಡಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಗಂಗಾಧರ್, ನಗರ ಪ್ರಧಾನ ಕಾರ್ಯದರ್ಶಿ ಸೋಮ ಶೇಖರ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...