Karnataka ಕನ್ನಡ ನಾಡು- ನುಡಿ, ಸಂಸ್ಕೃತಿಯ ಸಂಕೇತವಾದ ತಾಯಿ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಸುಮಾರು 23 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದಷ್ಟು ಬೇಗ ಈ ಕಾಮಗಾರಿಯನ್ನು ಪ್ರಾರಂಭಿಸುವ ಇಚ್ಛೆಯನ್ನು ಸಂಪುಟ ವ್ಯಕ್ತಪಡಿಸಿದೆ.
Karnataka ಕನ್ನಡ ನಾಡು ಏಕೀಕರಣಗೊಂಡು, ಕರ್ನಾಟಕ ಎಂಬ ಹೆಸರು ನಾಮಕರಣವಾಗಿ 50 ವರ್ಷ ಸಂದಿರುವ ಸಂದರ್ಭದಲ್ಲಿ ಕನ್ನಡದ ಪ್ರತೀಕದ ಗುರುತು ಸರ್ಕಾರದ ಆವರಣದಲ್ಲಿರ ಬೇಕೆಂಬ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ.