Monday, February 2, 2026
Monday, February 2, 2026

Sagar City Police Station ₹17 ಲಕ್ಷ ಮೌಲ್ಯದ ಸಿಗರೇಟ್ ದಾಸ್ತಾನು ಪೆಟ್ಟಿಗೆ ಕಳವು ಪ್ರಕರಣ ಪತ್ತೆ ಹಚ್ಚಿದ ಸಾಗರ ಪೊಲೀಸ್ ಸಿಬ್ಬಂದಿ

Date:

Sagar City Police Station ಸಾಗರ ಪೊಲೀಸರು ವಿಶೇಷ ಕಾರ್ಯಾಚರಣೆ ಒಂದರಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ಪೇಟೆಯ ಯನೈಟೆಡ್ ಟ್ರೇಡಿಂಗ್ ಕಂಪನಿಯಲ್ಲಿ 2023ರ ಮೇ ತಿಂಗಳಲ್ಲಿ ನಡೆದಿದ್ದ 17 ಲಕ್ಷ ಮೊತ್ತದ ಸಿಗರೇಟ್ ತುಂಬಿದ್ದ ಬಾಕ್ಸ್ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಈ ಸಂಬಂಧ ಒಬ್ಬ ಅಂತರ ರಾಜ್ಯ ಕಳ್ಳನನ್ನು ಬಂಧಿಸಿರುವ ಸಾಗರ ಟೌನ್ ಪೊಲೀಸ್ ಸ್ಟೇಷನ್ ಪೋಲಿಸರು, ₹6 ಲಕ್ಷ ವಶ ಪಡಿಸಿಕೊಂಡಿದ್ದಾರೆ.

ಅಲ್ಲದೆ ಪ್ರಕರಣ ಸಂಬಂಧ ಮೂವರಿಗೆ ಹುಡುಕಾಟ ಮುಂದುವರಿಸಿದ್ದಾರೆ.

ರಾಜಸ್ಥಾನದ ಜಾಲೂರು ಜಿಲ್ಲೆಯ ಮಾಂಡವಾಲ ಗ್ರಾಮದ ನಿವಾಸಿ ಜೀತೇಂದ್ರ ಕುಮಾರ್ (27) ಬಂಧಿತ ಆರೋಪಿ,
ಕಳೆದ ವರ್ಷ ಮೇ ತಿಂಗಳ 14ರಂದು ಪಟ್ಟಣದ ಸೊರಬ ರಸ್ತೆಯ ಯುನೈಟೆಡ್ ಟ್ರೇಡಿಂಗ್ ಕಂಪೆನಿ ಕಟ್ಟಡದ ಹಿಂದಿನ ಬಾಗಿಲು ಒಡೆದು ಕಳ್ಳತನ ಮಾಡಲಾಗಿತ್ತು. ಅಲ್ಲಿದ್ದ ₹17 ಲಕ್ಷ ಮೌಲ್ಯದ ಸಿಗರೇಟ್ ತುಂಬಿದ್ದ ಬಾಕ್ಸ್‌ ಗಳನ್ನು ಕಳವು ಮಾಡಲಾಗಿತ್ತು. ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿ ಆಧರಿಸಿ, ತನಿಖೆ ಪ್ರಾರಂಭಿಸಿದ್ದ ಪೊಲೀಸರಿಗೆ ವಾಹನದ ನಂಬರ್ ದೊರೆತಿತ್ತು.

Sagar City Police Station ವಾಹನದ ನಂಬರ್ ಪಡೆದು ವಿಚಾರಣೆ ಆರಂಭಿಸದ ಪೊಲೀಸರಿಗೆ ಹುಬ್ಬಳ್ಳಿಯಲ್ಲಿ ಬಾಡಿಗೆಗೆ ಬಂದಿದ್ದ ರಾಜಸ್ಥಾನ ಮೂಲದ ಮೂವರು ಯುವಕರು ಕಾರನ್ನು ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕಾರಿನ ಮಾಲೀಕನನ್ನು ಹೋಟೆಲ್‌ನಲ್ಲಿ ಬಿಟ್ಟು ಸಾಗರಕ್ಕೆ ಬಂದು ಕಳ್ಳತನವೆಸಗಿರುವುದು ಗೊತ್ತಾಗಿದೆ.
ಇನ್ನೂ ಆರೋಪಿಗಳು ಸಾಗರಕ್ಕೆ ಬಂದು ಹೋಲ್‌ಸೇಲ್ ಸಿಗರೇಟು ಮಾರುವವರು ಯಾರಿದ್ದಾರೆ. ಅವರಲ್ಲಿ ಎಷ್ಟು ಮಾಲಿದೆ ಎನ್ನುವುದೆಲ್ಲದರ ಮಾಹಿತಿ ಕಲೆ ಹಾಕಿದ್ದರು ಎನ್ನಲಾಗಿದೆ. ಕದ್ದಿದ್ದ ಸಿಗರೇಟನ್ನು ಮಾರಾಟ ಮಾಡಿ, ಬಂದ ಹಣವನ್ನು ಎಲ್ಲರೂ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಆರೋಪಿಗಳು ಬಿಜಾಪುರ, ಸಿಂಧಗಿ, ಸವದತ್ತಿ ಸೇರಿದಂತೆ ಹಲವೆಡೆ ಹೋಲ್‌ಸೇಲ್ ಸಿಗರೇಟ್ ಮಾರಾಟ ಮಾಡುವವರನ್ನು ದೋಚಿರುವುದು ಇದೇ ವೇಳೆ ಪತ್ತೆಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...