Monday, May 13, 2024
Monday, May 13, 2024

Shivamogga DC ಸಾರ್ವಜನಿಕರೆ ಪ್ರಯಾಣದ ಸಂದರ್ಭದಲ್ಲಿ₹50.000 ಕ್ಕಿಂತ ಹೆಚ್ಚು‌ ನಗದು ಸಂಗಡವಿದ್ದರೆ ದಾಖಲೆ ತೋರಿಸಬೇಕು

Date:

Shivamogga DC ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ ಎಂದು ಭಾರತ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದ್ದು, ಮಾರ್ಚ್ 16ರಿಂದಲೇ ಚುನಾವಣಾ ನೀತಿಸಂಹಿತೆ ಜಾರಿಗೆ ಬಂದಿರುವುದಾಗಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು.

ಅವರ ಶಿವಮೊಗ್ಗದ ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು.

ಈ ಚುನಾವಣೆಗೆ ಏಪ್ರಿಲ್ 12ರಿಂದ 19ರವರೆಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗುವುದು. ಏಪ್ರಿಲ್ 20ರಂದು ನಾಮಪತ್ರಗಳ ಪರಿಶೀಲನೆ, ಏ.22ರಂದು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆಯಲು ಕೊನೆಯ ದಿನವಾಗಿರಲಿದೆ. ಅಂತಿಮವಾಗಿ ಮೇ 7ರಂದು ಮತದಾನ ಪ್ರಕ್ರಿಯೆ ನಡೆದು, ಮೇ 6ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯು ರೂ.25000 ರೂ.ಗಳ ಭದ್ರತಾ ಠೇವಣಿಯನ್ನು ಪರಿಶಿಷ್ಟ ಅಭ್ಯರ್ಥಿಗಳಾಗಿದ್ದಲ್ಲಿ 12,500 ರೂ.ಗಳ ಭದ್ರತಾ ಠೇವಣಿಯನ್ನು ಇರಿಸಬೇಕಾಗುವುದು.

ಅಭ್ಯರ್ಥಿಯು ಚುನಾವಣಾ ವೆಚ್ಚ ರೂ.95,000ಗಳ ವರೆಗೆ ವೆಚ್ಚ ಮಾಡಲು ಹಾಗೂ ಅಭ್ಯರ್ಥಿಯು 4 ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 852107 ಪುರುಷ ಮತ್ತು 877761 ಮಹಿಳಾ ಮತದಾರರು ಹಾಗೂ 33 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 1729901 ಮತದಾರರು ಇರಲಿದ್ದಾರೆ.

ಇವರಲ್ಲಿ 18-19 ವರ್ಷದೊಳಗಿನ ಹಾಗೂ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಸುಮಾರು 29,788ಯುವ ಮತದಾರರಿದ್ದಾರೆ. 85+ ವಯಸ್ಸಿನ 15,315 ಮತ್ತು ವಿಕಲಚೇತನ 18,888 ಮತದಾರರು ಈ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ ಎಂದರು.

ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಣೆಗಾಗಿ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಒಟ್ಟು 2039ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 8600 ಸಿಬ್ಬಂಧಿಗಳ ಸೇವೆಯನ್ನು ಚುನಾವಣೆಗಾಗಿ ಬಳಸಿಕೊಳ್ಳಲಾಗುತ್ತಿದೆ.

ಅಲ್ಲದೇ ಚುನಾವಣಾ ಕಾರ್ಯಕ್ಕೆ ನಿಯೋಜಿಸುವ ಅಧಿಕಾರಿ-ಸಿಬ್ಬಂಧಿಗಳಿಗೆ ಈಗಾಗಲೇ ವಿವಿಧ ಹಂತದಲ್ಲಿ ತರಬೇತಿ ನೀಡಲಾಗಿದೆ ಎಂದರು.

ಬೈoದೂರು ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2039 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಅವುಗಳಲ್ಲಿ 325 ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಅಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಯ ನಿರ್ವಹಣೆಗಾಗಿ ಅಗತ್ಯ ಸಿಬ್ಬಂಧಿಗಳನ್ನು ನಿಯೋಜಿಸಲಾಗಿದೆ ಎಂದ ಅವರು, ಕೇವಲ ರಾಜಕೀಯ ಪಕ್ಷಗಳ ಮುಖಂಡರು ಮಾತ್ರವಲ್ಲದೇ ಸಾರ್ವಜನಿಕರೂ ಕೂಡ ಚುನಾವಣಾ ಆಯೋಗದ ನೀತಿ-ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿರ್ಲಕ್ಷಿಸಿದಲ್ಲಿ ಅನಿವಾರ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಯುವ ಮತದಾರರು ಅದರಲ್ಲೂ ವಿಶೇಷವಾಗಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು, ಯಾವುದೇ ಆಮಿಷಕ್ಕೆ ಒಳಗಾಗದೇ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಮತಗಟ್ಟೆಗಳಲ್ಲಿ 5 ಸಖಿ ಮತಗಟ್ಟೆಗಳನ್ನು, ಯುವ ಮತದಾರರು ಹೆಚ್ಚಿರುವಲ್ಲಿ 1 ವಿಶೇಷ ಮತಗಟ್ಟೆಯನ್ನು ಸ್ಥಾಪಿಸಲಾಗುವುದು ಅಲ್ಲದೇ ಸ್ಥಳೀಯ ವಿಶೇಷತೆಗಳನ್ನು ಒಳಗೊಂಡoತೆ ಒಂದು ಮತಗಟ್ಟೆಯನ್ನು ತೆರೆಯಲಾವುದು. ಕ್ಷೇತ್ರದ ವ್ಯಾಪ್ತಿಯಲ್ಲಿ ಕಂಡುಬರುವ ಯಾವುದೇ ಚುನಾವಣಾ ಅಕ್ರಮ, ಒತ್ತಡ, ಆಮಿಷ ಮುಂತಾದವು ಕಂಡುಬoದಲ್ಲಿ ಸಾರ್ವಜನಿಕರು ಸಿವಿಜಲ್ ಅ್ಯಪ್ ಮೂಲಕ ದೂರನ್ನು ದಾಖಲಿಸಿದಲ್ಲಿ, ಈ ದೂರನ್ನು ಗಂಭೀರವಾಗಿ ಪರಿಗಣಿಸಿ ಕೆಲವೇ ಗಂಟೆಗಳ ಅವಧಿಯಲ್ಲಿ ಅಕ್ರಮ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಇದರೊಂದಿಗೆ ಮತದಾರರ ಅನುಕೂಲಕ್ಕಾಗಿ ದಿನದ 24 ಗಂಟೆಯೂ 1950 ಸಹಾಯವಾಣಿ ಕಾರ್ಯನಿರ್ವಹಿಸಲಿದೆ ಎಂದರು.

ಈ ಚುನಾವಣೆಯ ವ್ಯವಸ್ಥಿತ ನಿರ್ವಹಣೆಗಾಗಿ ಹಲವು ತಂಡಗಳನ್ನು ರಚಿಸಲಾಗಿದ್ದು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮಾಧ್ಯಮಗಳಲ್ಲಿ ಪ್ರಕಟಗೊಳಿಸುವ ಯಾವುದೇ ಜಾಹಿರಾತು, ಪಾವತಿಸುವ ಸುದ್ದಿ ಮುಂತಾದವುಗಳನ್ನು ಪ್ರಕಟಿಸುವ ಮುನ್ನ ನಿಯಮಾನುಸಾರ ಅನುಮತಿ ಪಡೆದುಕೊಳ್ಳುವಂತೆ ಹಾಗೂ ಊರಿಂದೂರಿಗೆ ಪ್ರಯಾಣಿಸುವ ಸಂದರ್ಭದಲ್ಲಿ 50,000ಕ್ಕಿಂತ ಹೆಚ್ಚಿನ ಹಣ ಇಟ್ಟುಕೊಂಡಿದ್ದಲ್ಲಿ ಅಗತ್ಯ ದಾಖಲೆಗಳನ್ನು ಹೊಂದಿರಬೇಕು. ಒಂದು ಲಕ್ಷಕ್ಕೂ ಹೆಚ್ಚಿನ ಹಣ ದೊರೆತಲ್ಲಿ ಆದಾಯ ತೆರಿಗೆ ಇಲಾಖಾಧಿಕಾರಿಗಳ ತನಿಖೆಗೆ ಶಿಫಾರಸ್ಸು ಮಾಡಲಾಗುವುದು ಎಂದವರು ತಿಳಿಸಿದರು.

ಸಾರ್ವಜನಿಕರು ಸೇರಿದಂತೆ ಯಾವುದೇ ರಾಜಕೀಯ ಪಕ್ಷಗಳ ಮುಖಂಡರು ಬಹಿರಂಗ ಸಭೆ, ಸಮಾರಂಭಗಳನ್ನು ಆಯೋಜಿಸುವವರ ಅನುಕೂಲಕ್ಕಾಗಿ ಕೋರಿಕೆಗೆ ಅನುಮತಿ ನೀಡಲು ಏಕಗವಾಕ್ಷಿ ಪದ್ದತಿಯಲ್ಲಿ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುವುದು.

Shivamogga DC ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಖಾತ್ರಿ ಪಡಸಿಕೊಳ್ಳುವಂತೆ ಹಾಗೂ ಈವರೆಗೆ ಹೆಸರು ಸೇರ್ಪಡೆಗೊಳಿಸಿಕೊಳ್ಳದಿರುವವರು ತಮ್ಮ ಹೆಸರನ್ನು ಸೇರ್ಪಡೆಗೊಳಿಸಿಕೊಳ್ಳಲು ಏಪ್ರಿಲ್ 14 ರವರೆಗೆ ಅವಕಾಶ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರು ಮಾತನಾಡಿ, ಚುನಾವಣಾ ಕಾರ್ಯಕ್ಕೆ ಸುಮಾರು 3000 ಕ್ಕೂ ಹೆಚ್ಚಿನ ಹೆಚ್ಚಿನ ಪೊಲೀಸ್ ಹಾಗೂ ಗೃಹರಕ್ಷಕ ಸೇವೆಯನ್ನು ಹಾಗೂ ಪ್ಯಾರಾ ಮಿಲಿಟರಿ ತುಕಡಿಗಳ ಸೇವೆಯನ್ನು ಬಳಸಿಕೊಳ್ಳಲಾಗುವುದು. ಈಗಾಗಲೇ 1500ರೌಡಿ ಶೀಟರ್‌ಗಳ, ಗೂಂಡಾಗಳ ಮೇಲೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈಲ್ಲೆಯಲ್ಲಿ ಸಾರ್ವಜನಿಕರು ಹೊಂದಿರುವ ಶಸ್ತ್ರಾಸ್ತ್ರಗಳನ್ನು ಡಿಪಾಜಿಟ್ ಮಾಡುವಂತೆಯೂ ಸೂಚಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಸೇರಿದಂತೆ ಜಿಲ್ಲಾ ಚುನಾವಣಾ ಶಾಖೆಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shankaracharya Jayanti ವಿಜಯನಗರದಲ್ಲಿಅಂಬಾರಿ ಗೌರವದೊಂದಿಗೆ ಶಂಕರ ಜಯಂತಿ ಆಚರಣೆ

ಪ್ರಪ್ರಥಮ ಬಾರಿಗೆ ಶಂಕರಾಚಾರ್ಯರಿಗೆ ಆನೆ ಅಂಬಾರಿಯ ಉತ್ಸವ Shankaracharya Jayanti ವೈಶಾಖ...

Online Fraud ಆನ್ ಲೈನ್ ಮೂಲಕ ನೌಕರಿ ಭರವಸೆಯಿಂದ ಮೋಸ ಹೋದ ಯುವತಿ

Online Fraud ಇಲ್ಲೊಬ್ಬ ಯುವತಿ ಆನ್ ಲೈನ್ ಮೋಸಕ್ಕೆ ಬಲಿಯಾಗಿದ್ದಾಳೆ. ಟೆಲಿಗ್ರಾಂ...

Karnataka Police ಸೌಳಿ ಗ್ರಾಮಕ್ಕೆ ನೀರು ಪೂರೈಸುವ ಪೈಪುಗಳ ಅಪಹರಣ

Karnataka Police ತೀರ್ಥಹಳ್ಳಿ ತಾಲೂಕಿನ ಸೌಳಿ ಗ್ರಾಮದ ಸಮೀಪ ಮಾಲತಿ ನದಿ...

Ayanur Manjunath ನೈಋತ್ಯ ಪದವೀಧರರ ಕ್ಷೇತ್ರ: ಕಾಂಗ್ರೆಸ್ ನಿಂದ ಬಿ ಫಾರ್ಮ್ ಪಡೆದ ಆಯನೂರು ಮಂಜುನಾಥ್

Ayanur Manjunath ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರು ನೈರುತ್ಯ ಪದವೀಧರ ಕ್ಷೇತ್ರದ...