High Court of Karnataka ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಬಳಕೆ ಮಾಡದ
ವಾಣಿಜ್ಯ ಸಂಸ್ಥೆಗಳು, ಅಂಗಡಿ-ಮುಂಗಟ್ಟುಗಳನ್ನು ಮುಚ್ಚದಂತೆ ಸರಕಾರಕ್ಕೆ
ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಕನ್ನಡ ಕಡ್ಡಾಯಗೊಳಿಸುವ ಕಾಯಿದೆ ಹಾಗೂ ಸುತ್ತೋಲೆಯನ್ನು ಪ್ರಶ್ನಿಸಿ
ರೀಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಹಾಗೂ ಹಲವು ಕಂಪನಿಗಳು
ಸಲ್ಲಿಸಿದ್ದತಕರಾರು ಅರ್ಜಿಗಳನ್ನು ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
High Court of Karnataka ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ಸುತ್ತೋಲೆ ಅನುಸಾರ
ವಾಣಿಜ್ಯ ಸಂಸ್ಥೆಗಳ ವಿರುದ್ಧ ಸದ್ಯಕ್ಕೆ ಬಲವಂತದ ಕ್ರಮ ಜರುಗಿಸಬಾರದು. ಹಾಗೆಯೇ,
ಕಾಯಿದೆ ಯಾವ ದಿನದಿಂದ ಜಾರಿಗೆ ಬಂದಿದೆ, ಯಾವ ದಿನ ಸರಕಾರದ ರಾಜ್ಯಪತ್ರದಲ್ಲಿ
ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು, ಎಂದು
ಸರಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.