Agri News ರೈತರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದು, ರೈತರ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪೂರಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಎಂದು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ಅಧ್ಯಕ್ಷ ಸಿ.ರಾಜು ಅಭಿಪ್ರಾಯಪಟ್ಟರು.
ತೋಟಗಾರಿಕಾ ಇಲಾಖೆ ಶಿವಮೊಗ್ಗ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ವತಿಯಿಂದ ಸುವ್ವಿ ಫಾರ್ಮ್ಸ್ನಲ್ಲಿ ಆಯೋಜಿಸಿದ್ದ ಜಿಲ್ಲಾ ಯೋಜನೆ ಮಣ್ಣಿನ ಫಲವತ್ತತೆ ಹಾಗೂ ಮಿಶ್ರ ಬೆಳೆ ಕೃಷಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ರೋಟರಿ ಸಂಸ್ಥೆಯು ಸೇವಾ ಚಟುವಟಿಕೆಗಳ ಜತೆಯಲ್ಲಿ ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ವಿಶೇಷ ಕಾರ್ಯಾಗಾರಗಳನ್ನು ನಡೆಸಿದೆ. ರೈತರಿಗೆ ಉಪಯುಕ್ತ ಆಗುವ ನಿಟ್ಟಿನಲ್ಲಿ ಇಲಾಖೆ ಜತೆಯಲ್ಲಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಶಿವಮೊಗ್ಗ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಗಿರೀಶ.ಆರ್, ಮಣ್ಣಿನ ಫಲವತ್ತತೆ, ಮೆಣಸು, ಏಲಕ್ಕಿ, ವೆನಿಲಾ ಬೆಳೆಯುವ ರೀತಿ ನೀತಿಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ನೂರಾರು ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಿಜ್ಞಾನಿಗಳೊಂದಿಗೆ ರೈತರು ಸಂವಾದ ನಡೆಸಿ ಪ್ರಶ್ನೆಗಳಿಗೆ ಉತ್ತರ ಪಡೆದುಕೊಂಡರು.
Agri News ಪಿಡಿಜಿ ರವಿ.ಎಚ್.ಎಲ್. ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ರೋಟರಿ ಮಂಜುಳಾ ರಾಜು, ತೋಟಗಾರಿಕೆ ಇಲಾಖೆಯ ಕಾಂತರಾಜ್, ಅರುಣ್, ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆಯ ಪ್ರಕಾಶಮೂರ್ತಿ, ಮುಸ್ತಕ್, ರಶ್ಮಿ, ಶ್ರೀಕಾಂತ್, ಡಾ. ಶ್ರೀನಿವಾಸ್, ಇನ್ನಿತರ ಸದಸ್ಯರು, ಸ್ಥಳೀಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.