Monday, February 2, 2026
Monday, February 2, 2026

Arvind Kejriwal ಅಬಕಾರಿ ನೀತಿ ಪರಿಷ್ಕರಣೆ ಅಕ್ರಮ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ

Date:

Arvind Kejriwal ಅಬಕಾರಿ ನೀತಿ ಪರಿಷ್ಕರಣೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದ್ದು ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿ, ವಿಚಾರಣೆ ನಡೆಸಿ ಇದೀಗ ಬಂಧಿಸಿದೆ.

ಅರವಿಂದ್ ಕೇಜ್ರಿವಾಲ್ ಬಂಧನ
ಇಡಿಯಿಂದ ಕೇಜ್ರಿವಾಲ್ ವಿಚಾರಣೆ; ಬಂಧನ ಸಾಧ್ಯತೆ: ‘ಸುಪ್ರೀಂ’ ಮೊರೆ ಹೋದ ದೆಹಲಿ ಸಿಎಂ, ಭದ್ರತೆ ಹೆಚ್ಚಳ
ಇಡಿ ಅಧಿಕಾರಿಗಳ ತಂಡ ದೆಹಲಿ ಸಿಎಂ ನಿವಾಸಕ್ಕೆ ಆಗಮಿಸಿದ ಕಾರಣ, ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ ಮತ್ತು ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

Arvind Kejriwal ದೆಹಲಿ ಸಿಎಂ ನಿವಾಸದ ಬಳಿ ಮತ್ತು ಇಡಿ ಕಚೇರಿ ಬಳಿ ದೆಹಲಿ ಪೊಲೀಸ್ ಸಿಬ್ಬಂದಿಯೊಂದಿಗೆ RAF ಮತ್ತು CRPF ಪಡೆಗಳನ್ನು ನಿಯೋಜಿಸಲಾಗಿದೆ. ಸಿಎಂ ನಿವಾಸದ ಬಳಿ ಮತ್ತು ಇಡಿ ಕಚೇರಿ ಬಳಿ ಎಎಪಿ ಕಾರ್ಯಕರ್ತರು ಸೇರುವ ನಿರೀಕ್ಷೆ ಇರುವು ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಡಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೋರಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...