Friday, March 20, 2026
Friday, March 20, 2026

Chandragutti ಚಂದ್ರಗುತ್ತಿಯಲ್ಲಿ ಸಾವಿಗೀಡಾದ ಮಂಗಗಳು: ಮಂಗನಕಾಯಿಲೆ ಆತಂಕದಲ್ಲಿ ಸಾರ್ವಜನಿಕರು

Date:

Chandragutti ಸೊರಬ ; ತಾಲೂಕಿನ ಚಂದ್ರಗುತ್ತಿ ಗ್ರಾಮದ ಸೊರಬ ರಸ್ತೆಯ ಜೈನ ಬಸದಿ ಬಳಿ ನಾಲ್ಕು ಮಂಗಗಳು ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಸೊರಬ ಪಕ್ಕದ ಶಿರಸಿ ತಾಲೂಕಿನಲ್ಲಿ ಇತ್ತೀಚೆಗೆ ಮಂಗನ ಕಾಯಿಲೆಗೆ ತುತ್ತಾಗಿ ವ್ಯಕ್ತಿಯೋರ್ವ ಮರಣ ಹೊಂದಿರುವುದು ವರದಿಯಾಗಿದೆ. ಅದರ ಬೆನ್ನಲ್ಲೇ ಚಂದ್ರಗುತ್ತಿ ಗ್ರಾಮದಲ್ಲಿ ಮಂಗಗಳು ಸತ್ತಿರುವುದು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಚಂದ್ರಗುತ್ತಿ ಭಾಗದಲ್ಲಿ ಈಚೆಗೆ ಅವ್ಯಾಹತವಾಗಿ ಅರಣ್ಯ ನಾಶದ ಜೊತೆಗೆ ಬೆಂಕಿ ಹಚ್ಚಿದ ಪರಿಣಾಮ ಪಶು ಪಕ್ಷಿಗಳಿಗೆ ಆಹಾರ ಸಿಗದಂತಾಗಿದೆ. ನೀರು ಆಹಾರ ಅರಿಸಿ ನಾಡಿಗೆ, ಹೊಲ ಗದ್ದೆಗಳ ಸಮೀಪಕ್ಕೆ ಬಂದು ಜನರ ಕ್ರೂರತ್ವಕ್ಕೆ ಬಲಿಯಾಗುತ್ತಿವೆ. ನದಿ, ಕೆರೆಗಳಿಗೆ ಪಂಪ್ ಹಚ್ಚುವ ಮೂಲಕ ನೀರು ಸಂಪೂರ್ಣ ಬರಿದಾಗಿದ್ದು ಮನುಷ್ಯನ ಉಪಯೋಗಕ್ಕೂ ನೀರು ಲಭಿಸದಂತಾಗಿದೆ.

ಈಚೆಗೆ ಗಿಳಿ, ಮಂಗಗಳು ನಡೆಸುತ್ತಿರುವ ದಾಳಿಯಿಂದ ಬೆಳೆಗಳನ್ನು ರಕ್ಷಿಸಿಕೊಳ್ಳಲು ವಾಸನೆ ರಹಿತ ಔಷಧಿಗಳನ್ನು ಬೆಳೆಗಳಿಗೆ ಸಿಂಪಡಿಸುತ್ತಿದ್ದು, ಅಂತಹ ಔಷಧಿ ಸೇವಿಸಿ ಮಂಗಗಳು ಮೃತಪಟ್ಟಿರಬಹುದು ಎಂದು ಅಧಿಕಾರಿಗಳು ಮತ್ತು ಸಾರ್ವಜನಿಕರು ಶಂಕಿಸಿದ್ದಾರೆ.

ಸ್ಥಳಕ್ಕೆ ಚಂದ್ರಗುತ್ತಿ ಪಶುವೈದ್ಯ ಸಿಬ್ಬಂದಿಗಳು ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ ಕಾಡಿನಲ್ಲಿ ಅಂತ್ಯ ಸಂಸ್ಕಾರ ನಡೆಸಿದರು.

Chandragutti ಚಂದ್ರಗುತ್ತಿ ಗ್ರಾ.ಪಂ. ಪಿಡಿಒ ನಾರಾಯಣಮೂರ್ತಿ, ಗ್ರಾಪಂ ಸದಸ್ಯ ಎಂ.ಪಿ. ರತ್ನಾಕರ್, ಪಶು ವೈದ್ಯ ಸಿಬ್ಬಂದಿ ಕಣ್ಣಪ್ಪ, ಪ್ರಾಥಮಿಕ ಆರೋಗ್ಯ ಕೇಂದ್ರದ ವೀಣಾ, ಹೇಮಾ, ಮುದಾಸಿರ್, ಆಶಾ ಕಾರ್ಯಕರ್ತೆಯರಾದ ಅಶ್ವಿನಿ, ಶರಾವತಿ, ಅರಣ್ಯ ಸಿಬ್ಬಂದಿ ಪ್ರಶಾಂತ್,
ಗ್ರಾಮಸ್ಥರಾದ ಕೃಷಪ್ಪ, ಪ್ರಶಾಂತ್ ನಾಯ್ಕ್ ಸ್ಥಳಕ್ಕೆ ಭೇಟಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...